Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ | ಮನೆಗೆ ನುಗ್ಗಿ ನಗ-ನಗದು...

ಸುರತ್ಕಲ್ | ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Dec 2025 11:53 PM IST
share
ಸುರತ್ಕಲ್ | ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಸುರತ್ಕಲ್, ಡಿ.15: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ ಭಜನಾ ಮಂದಿರ ಬಳಿಯ ನಿವಾಸಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ (21), ಬೆಂಗಳೂರು ಎಳಚನಹಳ್ಳಿ, ಕಾಶಿನಗರ 5ನೇ ಕ್ರಾಸ್ ನಿವಾಸಿ ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ (33), ಬೆಂಗಳೂರು ಉಡಿಪಾಳ್ಯ ಕನಕಪುರ ಮುಖ್ಯ ರಸ್ತೆ ನಿವಾಸಿ ಗಿರೀಶ್ ಯಾನೆ ಸೈಕಲ್ ಗಿರಿ (28) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 4.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಬೈಕ್, 3 ಮೊಬೈಲ್ ಫೋನ್ ಹಾಗೂ 3 ಸಾವಿರ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬಳಿಕ ಸುರತ್ಕಲ್ ಪೊಲೀಸ್ ಉಪ ನಿರೀಕ್ಷಕ ರಘು ನಾಯ್ಕ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿ, ಕಳವು ಕೃತ್ಯ ನಡೆದಿದ್ದ ಮನೆಯ ಸಮೀಪದ ಎಲ್ಲಾ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ಶೈನ್ ಎಚ್. ಪುತ್ರನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ಜೈಸನ್ ಯಾನೆ ಲೆನ್ಸನ್ ಎಂಬಾತನೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದು, ಕಳವುಗೈದ ಚಿನ್ನಾಭರಣವನ್ನು ಬೆಂಗಳೂರಿನ ವಿನೋದ್ ಕುಮಾರ್‌ಗೆ ಮಾರಾಟ ಮಾಡಿರುವುದಾಗಿ ಬಾಯಿಬಿಟ್ಟಿದ್ದ.

ಇದೇ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯದಲ್ಲಿ ನೇರ ಭಾಗಿಯಾಗಿದ್ದ ಇನ್ನೋರ್ವ ಆರೋಪಿ ಜೈಸನ್ ಯಾನೆ ಲೆನ್ಸನ್ ಕಾರ್ಕಳ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಆರೋಪಿಗಳ ಪೈಕಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ ಎಂಬಾತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆಯ 1 ಪ್ರಕರಣ, ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ ಮೇಲೆ ಬೆಂಗಳೂರಿನ ಕೆ.ಎಸ್.ಆರ್.ಲೇಔಟ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 2 ಕೊಲೆ, 2 ಕೊಲೆಯತ್ನ, 4 ದರೋಡೆ, 1 ಬೆದರಿಕೆ, 1 ಗಾಂಜಾ ಮಾರಾಟ, 1 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಗಿರೀಶ್ ಯಾನೆ ಸೈಕಲ್ ಗಿರಿ ಎಂಬಾತನ ಮೇಲೆ ಬೆಂಗಳೂರಿನ

ಕಗ್ಗಲಿಪುರ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು ಬೆಂಗಳೂರು ನಗರದ ವಿವಿಧ ಠಾಣೆಗಳಲ್ಲಿ 5 ಕೊಲೆಯತ್ನ, 1 ದರೋಡೆ, 3 ಹಲ್ಲೆ ಪ್ರಕರಣ ಸೇರಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags

Surathkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X