ಅಪ್ರಾಪ್ತೆಯ ಮೇಲೆ ದೌರ್ಜನ್ಯ ಪ್ರಕರಣ: ಮೂಡುಬಿದಿರೆ ಇನ್ಸ್ಪೆಕ್ಟರ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ವರದಿ ನೀಡಲು ಸೂಚನೆ

ಸಂದೇಶ್
► ಪೊಲೀಸ್ ಕಮಿಷನರ್ಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ► ಇನ್ಸ್ಪೆಕ್ಟರ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು
ಮಂಗಳೂರು:ಮೂಡುಬಿದಿರೆ ಇನ್ಸ್ಪೆಕ್ಟರ್ರಿಂದ ಅಪ್ರಾಪ್ತೆ ಬಾಲಕಿಯ ಮೇಲೆ ದೌರ್ಜನ್ಯ ಎಂದು ಖಾಸಗಿ ವಾಹಿನಿ ಯಲ್ಲಿ ಪ್ರಸಾರಗೊಂಡ ವರದಿಯನ್ನು ಆಧರಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಂಗಳವಾರ ಸ್ವಯಂ ಪ್ರೇರಿತ ದೂರು ದಾಖಲಿಸಿದೆ. ಅಲ್ಲದೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಐದು ದಿನದೊಳಗೆ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕರಣವೊಂದಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ಲಾಕ್ಮೇಲ್ ಮಾಡಿದ್ದಲ್ಲದೆ ಸಂತ್ರಸ್ತೆಯ ಅಪ್ರಾಪ್ತ ಮಗಳ ಮೇಲೆ ದೌರ್ಜನ್ಯ ನಡೆಸಲು ತಿಳಿಸಿದ್ದರ ಆಡಿಯೋ ತುಣುಕು ಹರಿದಾಡಿದೆ. ಇದು ಜೆ.ಜೆ. ಅಧಿನಿಯಮ ಮತ್ತು ಪೊಕ್ಸೊ ಕಾಯ್ದೆಯಡಿ ಪರಿಶೀಲಿಸಿ ತನಿಖೆ ನಡೆಸಬೇಕಾದ ಪ್ರಕರಣ ವಾಗಿದೆ. ಈಗಾಗಲೆ ಈ ಬಗ್ಗೆ ತನಿಖೆ ನಡೆಸುತ್ತಿರುವ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಅವರಿಗೆ ಈ ಎರಡೂ ಅಧಿನಿಯಮದಡಿ ತನಿಖೆ ನಡೆಸಿ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಆಯೋಗದ ಅಧ್ಯಕ್ಷ ಶಶಿಧರ ಎಸ್. ಕೋಸಂಬೆ ಸೂಚಿಸಿದ್ದಾರೆ.
Next Story




