Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭವಿಷ್ಯದ ಸತ್ಪ್ರಜೆಗಳ ರೂಪಿಸುವ ಅವಕಾಶ...

ಭವಿಷ್ಯದ ಸತ್ಪ್ರಜೆಗಳ ರೂಪಿಸುವ ಅವಕಾಶ ಶಿಕ್ಷಕರದ್ದು: ಯು.ಟಿ.ಖಾದರ್

ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Sept 2024 2:36 PM IST
share
ಭವಿಷ್ಯದ ಸತ್ಪ್ರಜೆಗಳ ರೂಪಿಸುವ ಅವಕಾಶ ಶಿಕ್ಷಕರದ್ದು: ಯು.ಟಿ.ಖಾದರ್

ಮಂಗಳೂರು, ಸೆ.5: ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸುವ ಅವಕಾಶ ಶಿಕ್ಷಕರದ್ದಾಗಿದ್ದು, ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಪೋಷಕರಿಗಿಂತಲೂ ಶಿಕ್ಷಕರ ಕೊಡುಗೆ ಮಹತ್ತರವಾದುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಆಶ್ರಯದಲ್ಲಿ ನಗದ ಪ್ರೆಸ್ಟೇಜ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಲಾದ ಶಿಕ್ಷಕರ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಸಮಸ್ಯೆಗಳನ್ನು ಕಡಿಮೆ ಮಾಡಿ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವ ಜವಾಬ್ಧಾರಿ ಜನಪ್ರತಿನಿಧಿಗಳದ್ದು. ಶಿಕ್ಷಕರ ಸಮಸ್ಯೆಗಳು ಗಮನಕ್ಕೆ ಬಂದಾಗ ಅವುಗಳನ್ನು ಪರಿಹರಿಸಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿಯೂ ಹಂತ ಹಂತವಾಗಿ ಕ್ರಮ ವಹಿಸಲಾಗುವುದು. ಕ್ಷೇತ್ರದಲ್ಲಿ ಮೂರು ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಅದರಲ್ಲಿ ಎಲ್ಲಾ ಪ್ರೌಢಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಗಳ ಬಗ್ಗೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಿದ್ದರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಳೀಯ ಕಾರ್ಪೊರೇಟರ್ ವೀಣಾ ಮಂಗಳ, ಕ್ಷೇತ್ರ ಸಮನ್ವಯಾಧಿಕಾರಿ (ಪ್ರಭಾರ) ಸುಷ್ಮಾ ವಿ. ಕಿಣಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಕೆ. ಮಂಜನಾಡಿ, ದೈರಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್, ಯೂನಿಯನ್ ಬ್ಯಾಂಕ್‌ನ ಡಿಜಿಎಂ ಎಂ. ರಾಜಮಣಿ, ಸಿಇಟಿ ಉಪನ್ಯಾಸಕ ಶಿವಾನಂದ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ. ಪ್ರಶಾಂತ್‌ಕುಮಾರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷೆ ಪ್ರಮೀಳಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮೈಸೂರು ವಿಭಾಗದ ಕಾರ್ಯದರ್ಶಿ ತ್ಯಾಗಂ ಹರೇಕಳ, ಡಯಟ್ ಉಪನ್ಯಾಸಕ ಆಂಟನಿ ಕುಟಿನ್ನೋ, ನೋಡಲ್ ಅಧಿಕಾರಿ ಪೀತಾಂಬರ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಹೇಸ್ ಕುಮಾರ್ ಹೊಳ್ಳ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ ಮೊದಲಾದವರು ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭಕ್ಕೂ ಮೊದಲು ಶಿಕ್ಷಕರಿಂದ ವಿವಿಧತೆಯಲ್ಲಿ ಏಕತೆಯನ್ನು ಸಾರುವ ನೃತ್ಯ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿಧಾನಸಭೆ ಸ್ಪೀಕರ್‌ರವರಿಗೆ ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಲಯದ 57 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ನೆರವೇರಿಸಲಾಯಿತು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಸ್ವಾಗತಿಸಿದರು. ಶಿಕ್ಷಕರಾದ ಮೋಹನ್ ಶಿರ್ಲಾಲ್ ಮತ್ತು ರಫೀಕ್ ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರು ಪೋಷಕರ ಪಾತ್ರವನ್ನೂ ನಿರ್ವಹಿಸಬೇಕಿದೆ

ಪೋಷಕರು ಮಕ್ಕಳ ಜತೆ ಕಳೆಯುವ ಸಮಯ ಅತ್ಯಲ್ಪವಾಗತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಶಿಕ್ಷಕರು ಪೋಷಕರ ಪಾತ್ರವನ್ನೂ ನಿರ್ವಹಿಸಬೇಕಾಗಿದೆ. ಪಠ್ಯ ಕಲಿಕೆಯ ಜತೆಗೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಯ ದೃಷ್ಟಿಯಿಂದ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗಳ ಬಗ್ಗೆಯೂ ಗಮನ ಹರಿಸಬೇಕು. ಇಂದಿನ ಮಕ್ಕಳು ತಮ್ಮ ಮಾನಸಿಕ ತೊಂದರೆಗಳನ್ನು ಯಾರಲ್ಲೂ ಹೇಳಲಾಗದೆ ತೊಳಲಾಡುವ ಕಾರಣ ಆತ್ಮಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಶಿಕ್ಷಕರು ತಮ್ಮ ಮಕ್ಕಳ ಮಾನಸಿಕ ತುಮುಲವನ್ನು ಗಮನಿಸಿ ಅವರ ಭಾವನೆಗಳನ್ನು ಕೇಳಿಸಿಕೊಳ್ಳುವ ತಾಳ್ಮೆಯನ್ನು ಬೆಳಿಸಿಕೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ನೀಡಿದ ಮಾನಸಿಕ ಆರೋಗ್ಯ ಕೇಂದ್ರದ ಪ್ರೊ. ಡಾ. ರಮೀಳಾ ಶೇಖರ್ ಶಿಕ್ಷಕರಿಗೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X