Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನರ ಮಧ್ಯೆ ಭಯ ಹುಟ್ಟಿಸುವವರೇ ನಿಜವಾದ...

ಜನರ ಮಧ್ಯೆ ಭಯ ಹುಟ್ಟಿಸುವವರೇ ನಿಜವಾದ ಭಯೋತ್ಪಾದಕರು: ಡಾ.ಲಕ್ಷ್ಮಿಪತಿ

*'ತಾಯಿ ಬೇರು' ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 April 2025 2:49 PM IST
share
ಜನರ ಮಧ್ಯೆ ಭಯ ಹುಟ್ಟಿಸುವವರೇ ನಿಜವಾದ ಭಯೋತ್ಪಾದಕರು: ಡಾ.ಲಕ್ಷ್ಮಿಪತಿ

ಮಂಗಳೂರು, ಎ.14: ಅನ್ಯೋನ್ಯವಾಗಿರುವ ಜನರ ಮಧ್ಯೆ ಭಯ ಹುಟ್ಟಿಸುವವರು ನಿಜವಾದ ಭಯೋತ್ಪಾದಕರಾಗಿದ್ದಾರೆ. ಈ ಭಯೋತ್ಪಾದಕರನ್ನು ಕರಾವಳಿಯ ಜನತೆ ಮಟ್ಟಹಾಕಬೇಕಿದೆ. ಅದಕ್ಕಾಗಿ ಮೌನ ಮುರಿದು ಪ್ರಬಲ ಹೋರಾಟ ಮಾಡಬೇಕಿದೆ ಎಂದು ಸಮಾಜಶಾಸ್ತ್ರಜ್ಞ ಡಾ. ಲಕ್ಷ್ಮಿಪತಿ ಸಿ.ಜೆ. ಹೇಳಿದ್ದಾರೆ.

'ಬಹು ಓದು ಬಳಗ' ಮಂಗಳೂರು ಪ್ರಕಟಿಸಿರುವ 'ತಾಯಿ ಬೇರು' (ಮಕ್ಕಳ ಏಳಿಗೆಗಾಗಿ ಜೀವ ತೇದವರ ಕಥನಗಳು) ಪುಸ್ತಕವನ್ನು ನಗರದ ಸಹೋದಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

ಕರಾವಳಿಯು ಬಹುಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಈ ಸಂಸ್ಕೃತಿಯನ್ನು ನಾಶಪಡಿಸಲು ಬೆರಳೆಣಿಕೆಯ ಕೆಲವು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ. ಇದಕ್ಕೆ ಶಾಂತಿ ಬಯಸುವ ಬಹುಸಂಖ್ಯಾತರು ಅವಕಾಶ ಮಾಡಿಕೊಡಬಾರದು. ಬಹುಜನರು ಮೌನವಾಗಿದ್ದರೆ ಕೋಮುವಾದಿ ಶಕ್ತಿಗಳಿಗೆ ಅದು ಮತ್ತಷ್ಟು ಅವಕಾಶ ಮಾಡಿಕೊಟ್ಟಂತಾಗುತ್ತದೆ. ತಳ ಸಮುದಾಯದ ಚರಿತ್ರೆಯನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಿದ್ದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್. ಅಂತಹ ಅಂಬೇಡ್ಕರ್ ಅವರ ಫೋಟೋವನ್ನು ಎಲ್ಲಿಡಬೇಕು ಎಂದು ಈ ಮತೀಯ ಶಕ್ತಿಗಳು ನಿರ್ಧರಿಸುವಷ್ಟರ ಮಟ್ಟಿಗೆ ತಲುಪಿರುವುದು ವಿಪರ್ಯಾಸ. ನಿಜವಾದ ಈ ಭಯೋತ್ಪಾದಕರು, ಮತೀಯವಾದಿಗಳು ಮಾದಕ ದ್ರವ್ಯ ವ್ಯಸನಿಗಳಿಗಿಂತಲೂ ಅಪಾಯಕಾರಿಗಳು ಎಂದು ಡಾ. ಲಕ್ಷ್ಮಿಪತಿ ಸಿ.ಜೆ. ಅಭಿಪ್ರಾಯಿಸಿದರು.

ಕರಾವಳಿಯಲ್ಲಿ ಬಹುಸಂಸ್ಕೃತಿಯನ್ನು ಕಟ್ಟಿದವರು ತೆರೆಮರೆಗೆ ಸರಿಯುತ್ತಿದ್ದಾರೆ. ಈ ಸಂಸ್ಕೃತಿಗಳನ್ನು ಕೆಡಹುವವರು ವಿಜೃಂಭಿಸುತ್ತಿದ್ದಾರೆ. ಇವೆಲ್ಲದರ ಮಧ್ಯೆ ಮುಸ್ಲಿಮರು, ಕ್ರೈಸ್ತರು, ದಲಿತರು, ಹಿಂದುಳಿದ ವರ್ಗದ ಶಾಂತಿ ಬಯಸುವ ಜನರು ಜೊತೆಗೂಡಿ ಬದುಕುವ ಕನಸನ್ನು ಕಾಣುತ್ತಿದ್ದಾರೆ. ಹಾಗಾಗಿ ನಮ್ಮದು ವಿಕಸಿತ ಭಾರತವಾಗಿದೆ. ಅಶಾಂತಿ ಬಯಸುವವರದ್ದು ಸಂಕುಚಿತ ಭಾರತದ ಕನಸನ್ನು ಕಾಣುತ್ತಿದ್ದಾರೆ. ಇಂತಹವರನ್ನು ನಾವು ಹಿಂದೂ ಧರ್ಮದಿಂದಲೇ ಹೊರಗೆ ಹಾಕುವ ಅಗತ್ಯವಿದೆ ಎಂದು ಡಾ. ಲಕ್ಷ್ಮಿಪತಿ ಸಿ.ಜೆ. ಹೇಳಿದರು.

ಆಕೃತಿ ಆಶಯ ಪಬ್ಲಿಕೇಶನ್ನ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯೆ ಡಾ. ಜ್ಯೋತಿ ಚೇಳ್ಯಾರು ವಹಿಸಿ ಮಾತನಾಡಿದರು.

ಉಪನ್ಯಾಸಕಿ ಡಾ.ಸುಧಾರಾಣಿ ಪುಸ್ತಕ ವಿಮರ್ಶೆ ಮಾಡಿದರು. ಅತಿಥಿಗಳಾಗಿ ತುಳು ಅಕಾಡಮಿಯ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್, ಸಮಾಜ ಸೇವಕಿ ಮಲ್ಪೆ ಶಾರದಕ್ಕ ಭಾಗವಹಿಸಿದ್ದರು.

ಆಕೃತಿ ಆಶಯ ಪಬ್ಲಿಕೇಶನ್ಸ್ನ ಪ್ರಕಾಶಕ ಕಲ್ಲೂರು ನಾಗೇಶ ಸ್ವಾಗತಿಸಿದರು. ಕೃತಿಯ ಪ್ರಧಾನ ಸಂಪಾದಕ ಡಾ. ಪ್ರಕಾಶ್ ಪಿಂಟೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಮತ್ತೋರ್ವ ಪ್ರಧಾನ ಸಂಪಾದಕ ಡಾ.ಶ್ರೀನಿವಾಸ ಹೊಡೆಯಾಲ ವಂದಿಸಿದರು. ಡಾ. ಉಷಾ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X