Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಸಂಘಟನ್ ಸೃಜನ್ ಅಭಿಯಾನ’ ಪ್ರಕ್ರಿಯೆ...

‘ಸಂಘಟನ್ ಸೃಜನ್ ಅಭಿಯಾನ’ ಪ್ರಕ್ರಿಯೆ ಕೇವಲ ಒಬ್ಬ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಹುಡುಕುವ ಕೆಲಸವಲ್ಲ: ಎಐಸಿಸಿ ವೀಕ್ಷಕ ಜಯಂತ್

ವಾರ್ತಾಭಾರತಿವಾರ್ತಾಭಾರತಿ28 July 2026 2:40 PM IST
share
‘ಸಂಘಟನ್ ಸೃಜನ್ ಅಭಿಯಾನ’ ಪ್ರಕ್ರಿಯೆ ಕೇವಲ ಒಬ್ಬ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಹುಡುಕುವ ಕೆಲಸವಲ್ಲ: ಎಐಸಿಸಿ ವೀಕ್ಷಕ ಜಯಂತ್

ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ವಾರಗಳ ಕಾಲ ನಡೆಯುವ ‘ಸಂಘಟನ್ ಸೃಜನ್ ಅಭಿಯಾನ’ ಪ್ರಕ್ರಿಯೆಯು ಕೇವಲ ಒಬ್ಬ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಹುಡುಕುವ ಕೆಲಸವಲ್ಲ. ಕಾಂಗ್ರೆಸ್ ಪಕ್ಷದ ಸಂಘಟನೆಯ ಇಲ್ಲಿನ ನೈಜ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ, ಅನುಭವಿ ಕಾರ್ಯಕರ್ತರ ಧ್ವನಿಯನ್ನು ಆಲಿಸುವ, ಕಾಂಗ್ರೆಸ್‌ನ ಶಕ್ತಿ ಮತ್ತು ಸವಾಲುಗಳನ್ನು ಪರಾಮರ್ಶಿಸುವ ಹಾಗೂ ಬಲವಾದ ಕಾಂಗ್ರೆಸ್ ನಿರ್ಮಾಣಕ್ಕೆ ರೋಡ್‌ಮ್ಯಾಪ್ ಸಿದ್ಧಪಡಿಸುವ ಮಹತ್ವದ ಅವಕಾಶವಾಗಿದೆ ಎಂದು ಎಐಸಿಸಿ ವೀಕ್ಷಕ ಹಾಗೂ ಕೇರಳ ಕೋಝಿಕ್ಕೋಡ್ ಉತ್ತರ ಕ್ಷೇತ್ರದ ಶಾಸಕ ಕೆ. ಜಯಂತ್ ಹೇಳಿದ್ದಾರೆ.

ಎಐಸಿಸಿ ನಿರ್ದೇಶನದಂತೆ, ‘ಸಂಘಟನಾ ಸೃಜನ್ ಅಭಿಯಾನ’ದಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಆಯ್ಕೆಗಾಗಿ ಸಮಾಲೋಚನೆ ನಡೆಸಲು ಎಐಸಿಸಿ ವೀಕ್ಷಕರಾಗಿ ಆಗಮಿಸಿರುವ ಅವರು ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಮತ್ತು ಮುಂಬರುವ ವರ್ಷಗಳಲ್ಲಿ ಸಾರ್ವಜನಿಕರ ಆಶೋತ್ತರಗಳನ್ನು ಈಡೇರಿಸಲು ಎಐಸಿಸಿ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಸಂಘಟನಾತ್ಮಕ ಅಭಿಯಾನ ಇದಾಗಿದೆ. ಬಲವಾದ ಸಂಘಟನೆಯೇ ಬಲವಾದ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಎಂಬುದು ಕಾಂಗ್ರೆಸ್‌ನ ಮೂಲ ತತ್ವ. ಚುನಾವಣೆಗಳಿಂದ ಸರ್ಕಾರಗಳು ಬದಲಾಗಬಹುದು, ಆದರೆ ಪಕ್ಷವೊಂದು ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕ ಮತ್ತು ನಿರಂತರ ಬಾಂಧವ್ಯ ಇಟ್ಟುಕೊಂಡಾಗ ಮಾತ್ರ ಅದು ಹೆಚ್ಚು ಜನಪ್ರಿಯವಾಗಿರುತ್ತದೆ. ಆ ಬಾಂಧವ್ಯವು ನಿಷ್ಠಾವಂತ ಕಾರ್ಯಕರ್ತರು, ಪರಿಣಾಮಕಾರಿ ಸ್ಥಳೀಯ ನಾಯಕತ್ವ ಹಾಗೂ ಪ್ರಜಾಸತ್ತಾತ್ಮಕ ಸಂಸ್ಕೃತಿಯಿಂದ ರೂಪುಗೊಳ್ಳುತ್ತದೆ ಎಂದು ನುಡಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿಯಾನದಲ್ಲಿ ನಾವು ಜಿಲ್ಲೆಯ ಹಿರಿಯ ನಾಯಕರು, ಜನಪ್ರತಿನಿಧಿಗಳು, ಮಾಜಿ ಪದಾಧಿಕಾರಿಗಳು, ಪೋಷಕ ಸಂಸ್ಥೆಗಳ ನಾಯಕರು, ಬ್ಲಾಕ್ ಅಧ್ಯಕ್ಷರು, ಮಂಡಲ ಮಟ್ಟದ ಪದಾಧಿಕಾರಿಗಳು, ತಳಮಟ್ಟದ ಕಾರ್ಯಕರ್ತರು ಹಾಗೂ ಸಿವಿಲ್ ಸೊಸೈಟಿ, ಸಮಾಜದ ಹಿರಿಯರೊಂದಿಗೆ ಪಕ್ಷದ ಸಂಘಟನೆಯ ಬಗ್ಗೆ ವಿವರವಾಗಿ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿದರು.

ಪ್ರತಿಯೊಬ್ಬರ ಸಲಹೆ, ಅಭಿಪ್ರಾಯ ಹಾಗೂ ಮೌಲ್ಯಮಾಪನಗಳನ್ನು ವಿವರವಾಗಿ ದಾಖಲಿಸಿ ಎಐಸಿಸಿಗೆ ಸಲ್ಲಿಸಲಾಗುವುದು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಂತಿಮ ನೇಮಕಾತಿ ನಿರ್ಧಾರವು ಎಐಸಿಸಿ ಹೈಕಮಾಂಡ್‌ನ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಎಲ್ಲಾ ಅಂಶಗಳನ್ನು ಪರಿಶೀಲಿಸಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಮೊದಲು ಪಕ್ಷ, ಆಮೇಲೆ ಉಳಿದೆಲ್ಲವೂ: ಈ ಬಾರಿ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಭಿನ್ನವಾಗಿದೆ. ಆಯ್ಕೆಯಾಗುವ ಜಿಲ್ಲಾಧ್ಯಕ್ಷರು ಮುಂಬರುವ ಚುನಾವಣೆಗಳ ಅಭ್ಯರ್ಥಿ ಆಯ್ಕೆಯ ಸ್ಕ್ರೀನಿಂಗ್ ಕಮಿಟಿ ಹಾಗೂ ಪಕ್ಷದ ಕೇಂದ್ರ ಚುನಾವಣಾ ಸಭೆಗಳಲ್ಲಿ ಭಾಗವಹಿಸಿ ಅಭಿಪ್ರಾಯ ನೀಡುವ ಅಧಿಕಾರ ಹೊಂದಿರುತ್ತಾರೆ. ‘ಮೊದಲು ಪಕ್ಷ, ಆಮೇಲೆ ಉಳಿದೆಲ್ಲವೂ’ ಎಂಬ ತತ್ವದಡಿ ಈ ಅಧಿಕಾರವನ್ನು ಜಿಲ್ಲಾ ಮಟ್ಟಕ್ಕೆ ನೀಡಲಾಗುತ್ತಿದೆ ಎಂದರು.

ಜಿಲ್ಲಾಧ್ಯಕ್ಷ ಹುದ್ದೆಯು ಕೇವಲ ಒಂದು ಪದವಿಯಲ್ಲ: ಕೇವಲ ಜನಪ್ರಿಯತೆ ಅಥವಾ ಹಿರಿತನದ ಆಧಾರದ ಮೇಲೆ ಸಂಘಟನೆಯ ನಾಯಕತ್ವವನ್ನು ತೀರ್ಮಾನಿಸಲು ಸಾಧ್ಯವಿಲ್ಲ. ನಾಯಕತ್ವಕ್ಕೆ ನಿಷ್ಠೆ, ಶಿಸ್ತು, ಪ್ರಾಮಾಣಿಕತೆ, ಸಂಘಟನಾ ಕೌಶಲ್ಯ, ರಾಜಕೀಯ ಪರಿಪಕ್ವತೆ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸುವ ಶಕ್ತಿ ಇರಬೇಕು. ಜಿಲ್ಲಾಧ್ಯಕ್ಷ ಹುದ್ದೆಯು ಕೇವಲ ಒಂದು ಪದವಿಯಲ್ಲ, ಅದು ಬ್ಲಾಕ್, ಬೂತ್ ಮಟ್ಟದ ಸಮಿತಿಗಳನ್ನು ಬಲಪಡಿಸುವ, ಯುವ ನಾಯಕರನ್ನು ಬೆಳೆಸುವ, ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ಯುವಕರು ಹಾಗೂ ಎಲ್ಲಾ ವರ್ಗದವರಿಗೂ ಸೂಕ್ತ ಪ್ರಾತಿನಿಧ್ಯ ನೀಡುವುದು ಕಾಂಗ್ರೆಸ್‌ನ ತತ್ವವಾಗಿದೆ. ಅನುಭವ ಹಾಗೂ ಯುವಶಕ್ತಿ ಎರಡೂ ಪರಸ್ಪರ ಗೌರವದಿಂದ ಒಟ್ಟಾಗಿ ಕೆಲಸ ಮಾಡುವ ವಾತಾವರಣ ಸೃಷ್ಟಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಅಪಾರ ರಾಜಕೀಯ ಹಾಗೂ ಸಾಮಾಜಿಕ ಇತಿಹಾಸವಿದೆ. ಹಿಂದೆ ಉಡುಪಿ-ದಕ್ಷಿಣ ಕನ್ನಡ ಒಂದಾಗಿದ್ದಾಗ ನಾವು 15ಕ್ಕೆ 15 ಸ್ಥಾನಗಳನ್ನು ಗೆದ್ದಿದ್ದೆವು. ದಕ್ಷಿಣ ಕನ್ನಡ ಒಂದರಲ್ಲೇ 8ರಲ್ಲಿ 7 ಸ್ಥಾನ ಗೆದ್ದ ದಿನಗಳಿದ್ದವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 136 ಸ್ಥಾನ ಗೆದ್ದು ಚಾರಿತ್ರಿಕ ಜಯ ಗಳಿಸಿದರೂ, ಇಲ್ಲಿ ನಮಗೆ ಸಿಕ್ಕಿದ್ದು 2 ಸ್ಥಾನ ಮಾತ್ರ ಎಂದರು.

ನಮ್ಮ ಗುರಿ ಸ್ಪಷ್ಟವಾಗಿದೆ: ದಕ್ಷಿಣ ಕನ್ನಡದ 8ಕ್ಕೆ 8 ಕ್ಷೇತ್ರಗಳನ್ನು ಗೆದ್ದು ಹಳೆಯ ವೈಭವವನ್ನು ಮರಳಿ ತರುವುದು. 2028ರ ವಿಧಾನಸಭೆ ಚುನಾವಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲು ಈಗಿನಿಂದಲೇ ಸಿದ್ಧತೆ ನಡೆಸುತ್ತೇವೆ ಎಂದು ಮಾಹಿತಿ ನೀಡಿದರು.

ಸಮರ್ಥ ನಾಯಕರ ದತ್ತಾಂಶ ಕ್ರೋಢೀಕರಣ: ನಾನು ಆಗಸ್ಟ್ 12ರವರೆಗೆ ಇಲ್ಲೇ ಇರುತ್ತೇನೆ. ಪ್ರತಿಯೊಬ್ಬ ಆಕಾಂಕ್ಷಿಯನ್ನೂ ನೇರವಾಗಿ ಭೇಟಿಯಾಗಿ, ಸಂದರ್ಶಿಸಿ ಪರಿಶೀಲಿಸುತ್ತೇವೆ. ಕೇವಲ ಜಿಲ್ಲಾಧ್ಯಕ್ಷರಷ್ಟೇ ಅಲ್ಲದೆ, ಬ್ಲಾಕ್, ಮಂಡಲ ಹಾಗೂ ಪಂಚಾಯತ್ ಚುನಾವಣೆಗಳಿಗೆ ಬೇಕಾಗುವ ಸಮರ್ಥ ನಾಯಕರ ದತ್ತಾಂಶವನ್ನು ಕೂಡ ನಾವು ಕ್ರೋಢೀಕರಿಸುತ್ತೇವೆ.

ಕಟ್ಟುನಿಟ್ಟಿನ ನಿಯಮವಿಲ್ಲ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹೇಳಿದಂತೆ ಜಿಲ್ಲಾಧ್ಯಕ್ಷ ಹುದ್ದೆಗೆ 50 ವರ್ಷಗಳ ವಯೋಮಿತಿ ಕಡ್ಡಾಯವೇ? ಎಂಬ ಪ್ರಶ್ನೆಗೆ ಉತ್ತರಿಸಿದ ಜಯಂತ್, ದಕ್ಷಿಣ ಕನ್ನಡ ಜಿಲ್ಲೆಗೆ ಕಡ್ಡಾಯವಾಗಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಆಗಬೇಕು ಅಥವಾ ಇಂತಹ ಸಮುದಾಯದವರೇ ಆಗಬೇಕು ಎಂಬ ಕಟ್ಟುನಿಟ್ಟಿನ ನಿಯಮವಿಲ್ಲ. ಪ್ರತಿಯೊಂದು ಜಿಲ್ಲೆಯ ಸನ್ನಿವೇಶಕ್ಕೆ ತಕ್ಕಂತೆ ಹೈಕಮಾಂಡ್ ನಿರ್ಧರಿಸುತ್ತದೆ. ಆದರೆ ರಾಷ್ಟ್ರಮಟ್ಟದಲ್ಲಿ 50 ವರ್ಷಕ್ಕಿಂತ ಕೆಳಗಿನವರು, ಮಹಿಳೆಯರು, ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದು ಹೇಳಿದರು.

‘ಇವರನ್ನೇ ಮಾಡಿ’ ಎಂದರೆ ನಾವು ಒಪ್ಪುವುದಿಲ್ಲ: ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಜಯಂತ್, ಚುನಾವಣೆ ಒಂದೇ ಪ್ರಜಾಸತ್ತಾತ್ಮಕ ಮಾರ್ಗವಲ್ಲ. ಪ್ರತಿಯೊಬ್ಬ ಕಾರ್ಯಕರ್ತನ ಮನೆ ಬಾಗಿಲಿಗೆ ಹೋಗಿ, ಪ್ರತಿಯೊಬ್ಬರ ಧ್ವನಿಯನ್ನು ಆಲಿಸಿ ಒಮ್ಮತಕ್ಕೆ ಬರುವುದು ಕೂಡ ಅತ್ಯಂತ ಉನ್ನತ ಪ್ರಜಾಸತ್ತಾತ್ಮಕ ಪ್ರಕ್ರಿಯೆಯೇ ಆಗಿದೆ. ನಾವು 17 ಬ್ಲಾಕ್‌ಗಳಿಗೆ ತೆರಳಿ ಸಹಸ್ರಾರು ಕಾರ್ಯಕರ್ತರ ಅಭಿಪ್ರಾಯ ಕ್ರೋಢೀಕರಿಸಿ, ಪ್ರತಿಯೊಬ್ಬ ಆಕಾಂಕ್ಷಿಯ ಪ್ಲಸ್-ಮೈನಸ್ ವಿವರಗಳನ್ನು ಹೈಕಮಾಂಡ್‌ಗೆ ನೀಡುತ್ತೇವೆ. ಯಾರೋ 50 ಜನ ಗುಂಪು ಕಟ್ಟಿಕೊಂಡು ಬಂದು ‘ಇವರನ್ನೇ ಮಾಡಿ’ ಎಂದರೆ ನಾವು ಒಪ್ಪುವುದಿಲ್ಲ. ನಾವು ಪ್ರತ್ಯೇಕವಾಗಿ ತಳಮಟ್ಟದ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸುತ್ತೇವೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕೆಪಿಸಿಸಿ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ, ಸಚಿವ ಯು.ಟಿ. ಖಾದರ್ ಅವರಂತಹ ಹಿರಿಯ ನಾಯಕರ ಅನುಭವ ಹಾಗೂ ಸಲಹೆಗಳನ್ನು ಗೌರವದಿಂದ ಸ್ವೀಕರಿಸುತ್ತೇವೆಯೇ ಹೊರತು, ಕೇವಲ ಒಬ್ಬ ನಾಯಕ ಹೇಳಿದ ಹೆಸರನ್ನು ಅಂತಿಮಗೊಳಿಸುವುದಿಲ್ಲ. ಎಐಸಿಸಿ ನಮಗೆ ನೀಡಿರುವ ಜವಾಬ್ದಾರಿ ಪಕ್ಷವನ್ನು ಮುನ್ನಡೆಸಬಲ್ಲ ನಿಷ್ಪಕ್ಷಪಾತ ನಾಯಕನನ್ನು ಆಯ್ಕೆ ಮಾಡುವುದಾಗಿದೆ ಎಂದು ಹೇಳಿದರು.

ನಿರ್ದಿಷ್ಟ ಗಡುವು ಇಲ್ಲ: ನಾನು ಇಂದು ಬೆಳಿಗ್ಗೆಯಷ್ಟೇ ಮಂಗಳೂರಿಗೆ ಆಗಮಿಸಿದ್ದು, ಈಗಷ್ಟೇ ಅರ್ಜಿ ನಮೂನೆಗಳನ್ನು ಜಿಲ್ಲಾಧ್ಯಕ್ಷರಿಗೆ ನೀಡುತ್ತಿದ್ದೇನೆ. ಅರ್ಜಿ ಸಲ್ಲಿಸಲು ಯಾವುದೇ ನಿರ್ದಿಷ್ಟ ಗಡುವು ಇಲ್ಲ. ನಾನು ಆಗಸ್ಟ್ 12ರವರೆಗೆ ಜಿಲ್ಲೆಯಲ್ಲೇ ಇರುತ್ತೇನೆ. ನಾವು 17 ಬ್ಲಾಕ್‌ಗಳಿಗೆ ಭೇಟಿ ನೀಡುವಾಗಲೂ ಕಾರ್ಯಕರ್ತರು ನೇರವಾಗಿ ತಮ್ಮ ಬಯೋಡೇಟಾವನ್ನು ನಮಗೆ ಹಸ್ತಾಂತರಿಸಬಹುದು. ಎಲ್ಲರನ್ನೂ ವೈಯಕ್ತಿಕವಾಗಿ ಭೇಟಿಯಾಗಿ ಚರ್ಚಿಸುತ್ತೇವೆ ಎಂದು ಜಯಂತ್ ಹೇಳಿದರು.

ಎಐಸಿಸಿ ಉಸ್ತುವಾರಿ ಸಮಿತಿಯ ಚಿಕ್ಕಮಗಳೂರು ಜಿಪಂ ಮಾಜಿ ಅಧ್ಯಕ್ಷ ಸತೀಶ್, ಚಿಕ್ಕಮಗಳೂರು ಜಿ.ಪಂ ಮಾಜಿ ಸದಸ್ಯ ಸದಾಶಿವ ಮತ್ತು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೊ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ನಿಗಮದ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಉಪಸ್ಥಿತರಿದ್ದರು.

Tags

Sanghatan Srujan AbhiyanCongressAICCJayant
share
ವಾರ್ತಾಭಾರತಿ
ವಾರ್ತಾಭಾರತಿ
Next Story
X