Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ದೂರು | ಸೋಮವಾರದ...

ಧರ್ಮಸ್ಥಳ ದೂರು | ಸೋಮವಾರದ ಕಾರ್ಯಾಚರಣೆಯಲ್ಲಿ ಮೂರು ಕಳೇಬರ ಪತ್ತೆ: ಸುಜಾತಾ ಭಟ್ ಪರ ವಕೀಲರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ5 Aug 2025 2:54 PM IST
share
ಧರ್ಮಸ್ಥಳ ದೂರು | ಸೋಮವಾರದ ಕಾರ್ಯಾಚರಣೆಯಲ್ಲಿ ಮೂರು ಕಳೇಬರ ಪತ್ತೆ: ಸುಜಾತಾ ಭಟ್ ಪರ ವಕೀಲರ ಹೇಳಿಕೆ
"ದೂರುದಾರ ಸಾಕ್ಷಿಗೆ ಹೊಸ ಸ್ಥಳ ಗುರುತಿಸಲು ಅವಕಾಶ ನೀಡಿದ ಎಸ್ಐಟಿ ಕ್ರಮ ಶ್ಲಾಘನೀಯ"

ಮಂಗಳೂರು: ಸೋಮವಾರ (ಆ.4) ಎಸ್ ಐ ಟಿ ಕಾರ್ಯಾಚರಣೆಯ ವೇಳೆ ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ ಅದರಲ್ಲಿ ಒಂದು ಕಳೇಬರ ಮಹಿಳೆಯದ್ದಾಗಿದೆ ಎಂದು, ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿನ್ನೆಯ ದಿನ ದೂರುದಾರ ಸಾಕ್ಷಿ ಗುರುತಿಸಿರುವ ಸ್ಥಳ ಸಂಖ್ಯೆ 11 ರ ಪ್ರದೇಶದಿಂದ ಸುಮಾರು 100 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ, ಸುಮಾರು 100 ಅಡಿ ಎತ್ತರದ ಗುಡ್ಡದ ಮೇಲೆ, ಉತ್ಖನನದ ಬಳಿಕ ಕನಿಷ್ಟ ಮೂರು ವ್ಯಕ್ತಿಗಳ ಕಳೇಬರಗಳು ಪತ್ತೆಯಾಗಿದ್ದು, ಅದರಲ್ಲಿನ ಒಂದು ಕಳೇಬರವು ಮಹಿಳೆಯದಾಗಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿಯೇ ಮಹಿಳೆಯ ಸೀರೆಯೂ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಆ ಪ್ರದೇಶಕ್ಕೆ ತೆರಳಿದ್ದ ತಂಡದ ಕೆಲವರು ಗುಡ್ಡವನ್ನು ಏರುವಾಗ ಜಾರಿಬಿದ್ದು ಗಾಯಗೊಂಡರು ಎಂದು ತಿಳಿದುಬಂದಿದೆ. ದೂರುದಾರನಾದ ಭೀಮ ಮೊದಲು ಗುರುತಿಸಿದ್ದ ಸ್ಥಳ ಸಂಖ್ಯೆ 11ರ ಬದಲು, ಅದರ ಪಕ್ಕಕ್ಕೆ ಕರೆದೊಯ್ಯಲು ಆತನಿಗೆ SIT ತಂಡವು ಅವಕಾಶ ನೀಡಿದ್ದರಿಂದಲೇ ಸೋಮವಾರದ ಕಾರ್ಯಾಚರಣೆ ಯಶಸ್ವಿಯಾಯಿತೆಂದು ಹೇಳಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೂರುದಾರ ಸಾಕ್ಷಿಯೂ ಮೊದಲ ದಿನ ಗುರುತು ಮಾಡಿದ ಸ್ಥಳದಲ್ಲಿಯೇ ಅಗೆಯಬೇಕು, ಅಲ್ಲಿಂದಲೇ ಕಳೆ ಬರಗಳನ್ನು ಹೊರ ತೆಗೆಯಬೇಕು ಎನ್ನುವುದು ಅವೈಜ್ಞಾನಿಕ ಮಾತ್ರವಲ್ಲ, ನಿರರ್ಥಕವೂ ಹೌದು. ಮೊದಲ ದಿನ ತೋರಿಸಿದ್ದ ಜಾಗಗಳನ್ನು ಗುರುತಿಸಲು ಸ್ವಾತಂತ್ರ್ಯವಿರುವ ವ್ಯಕ್ತಿಗೆ, ತಾನು ಮೊದಲು ಗುರುತಿಸಿದ್ದು ತಪ್ಪಾಗಿರಬಹುದೆಂದು ತಿದ್ದಿಕೊಳ್ಳಲು ಸಹಜ ಸ್ವಾತಂತ್ರ್ಯವೂ ಇದೆ. ಈ ನಿಟ್ಟಿನಲ್ಲಿ ಈವರೆಗಿನ ಎಸ್‌ಐಟಿಯ ಮತ್ತು ಶೋಧಕಾರ್ಯವನ್ನು ಮುನ್ನಡೆಸುತ್ತಿರುವ ತಂಡದ ಕಾರ್ಯಕ್ಷಮತೆಯು ಶ್ಲಾಘನೀಯ ಎಂದು ಸುಜಾತ ಭಟ್ ಪರ ವಕೀಲ ಮಂಜುನಾಥ್ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Sujata BhatDharmasthala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X