Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳಾಯಿಬೆಟ್ಟು: ಕಿರುಸೇತುವೆ ಸಂಚಾರ...

ಉಳಾಯಿಬೆಟ್ಟು: ಕಿರುಸೇತುವೆ ಸಂಚಾರ ನಿರ್ಬಂಧ; ಪರ್ಯಾಯ ಕ್ರಮವಾಗದ ಬಗ್ಗೆ ನ. 13ರಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Nov 2024 2:16 PM IST
share
ಉಳಾಯಿಬೆಟ್ಟು: ಕಿರುಸೇತುವೆ ಸಂಚಾರ ನಿರ್ಬಂಧ; ಪರ್ಯಾಯ ಕ್ರಮವಾಗದ ಬಗ್ಗೆ ನ. 13ರಂದು ಪ್ರತಿಭಟನೆ

ಮಂಗಳೂರು, ನ.9: ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲೆ ಮೇಲ್ಮನೆ ಎಂಬಲ್ಲಿ ಕಿರು ಸೇತುವೆ ಸಂಚಾರ ನಿರ್ಬಂಧ ಸಂಬಂಧಿಸಿ ನ.13ರಂದು ಬೆಳಗ್ಗೆ 10.30ಕ್ಕೆ ರಾಷ್ಟ್ರೀಯ ಹೆದ್ದಾರಿ 169ರ ಪರಾರಿಯಲ್ಲಿ ಸಾರ್ವಜನಿಕ ಪ್ರತಿಭಟನೆ ನಡೆಸಲಾಗುವುದು ಎಂದು ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಕೇಶ ಶೆಟ್ಟಿ ನಡಿಗುತ್ತು ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸೇತುವೆ ಶಿಥಿಲಗೊಂಡಿದೆ ಎಂಬ ಕಾರಣಕ್ಕೆ ಜಿಲ್ಲಾಡಳಿತ ಘನ ವಾಹನ ಸಂಚಾರ ನಿಷೇಧಿಸಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಕಿರುಸೇತುವೆ ಸಮೀಪ ತಾತ್ಕಾಲಿಕ ರಸ್ತೆ ನಿರ್ಮಾಣದ ಬೇಡಿಕೆ ಬಗ್ಗೆ ಮೂರು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ, ಸ್ಪಂದನೆ ಸಿಕ್ಕಿಲ್ಲ. ಆ ಕಾರಣ ಪ್ರತಿಭಟನೆ ಅನಿವಾರ್ಯ ಎಂದವರು ಹೇಳಿದರು.

ಉಳಾಯಿಬೆಟ್ಟು -ಪೆರ್ಮಂಕಿ, ಮಲ್ಲೂರು, ಬಿಸಿರೋಡ್, ಅರ್ಕುಳ, ಅಡ್ಯಾರ್‌ಗೆ ರಾಷ್ಟ್ರೀಯ ಹೆದ್ದಾರಿ 169ರಿಂದ ನೇರ ಸಂಪರ್ಕ ಹೊಂದಿರುವ ಈ ಕಿರುಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಲಾಗಿದೆ. ಇದರಿಂದಾಗಿ ಈ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಮಹಿಳೆಯರು, ವೃದ್ಧರ ಪ್ರಯಾಣ ಕಷ್ಟದಾಯವಾಗಿದೆ. ಕಿರು ಸೇತುವೆಯಲ್ಲಿ ವಾಹನ ಸಂಚಾರ ನಿಷೇಧದ ಬಳಿಕ ಈ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಹಾಗೂ ಶಾಲಾ ಕಾಲೇಜು ಬಸ್‌ಗಳು ಸುತ್ತು ಬಳಸಿ ತೆರಳುತ್ತಿವೆ. ಇದರಿಂದ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಗಮ್ಯಸ್ಥಾನ ತಲುಪಲಾಗುತ್ತಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಕಿರುಸೇತುವೆ ಸಮೀಪ ಖಾಸಗಿ ಜಾಗದಲ್ಲಿ ತಾತ್ಕಾಲಿನ ಮಣ್ಣಿನ ರಸ್ತೆ ನಿರ್ಮಿಸಲು ಜಾಗದ ಮಾಲಕರು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಕಾರಿ ಅವರನ್ನು ಭೇಟಿಯಾಗಿ ವಿವರಿಸಲಾಗಿದೆ. ಆದರೆ, ಜಿಲ್ಲಾಡಳಿತದಿಂದ ಪರ್ಯಾಯ ರಸ್ತೆ ಬಗ್ಗೆ ಯಾವುದೇ ಉತ್ತರ ಬಂದಿಲ್ಲ. ಉಳಾಯಿಬೆಟ್ಟು, ಪೆರ್ಮಂಕಿ, ಮಲ್ಲೂರು ಭಾಗದಿಂದ ವಿವಿಧ ಕಡೆ ತೆರಳುವ 350ಕ್ಕೂ ಅಧಿಕ ವಿದ್ಯಾರ್ಥಿಗಳು ಈಗ ತೊಂದರೆಗೀಡಾಗಿದ್ದಾರೆ. 20 ಕಿ.ಮೀ. ಸುತ್ತು ಬಳಸಿ ಮಂಗಳೂರಿಗೆ ಪ್ರಯಾಣಿಸಬೇಕಿದೆ. ಆಟೋರಿಕ್ಷಾಕ್ಕೆ 150 ರೂ. ಬಾಡಿಗೆ ಇದೆ. ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಗಮನಕ್ಕೂ ತಂದಿದ್ದೇವೆ. ಪರ್ಯಾಯ ರಸ್ತೆ ಬಗ್ಗೆ ನ.12ರೊಳಗೆ ಸೂಕ್ತ ಸ್ಪಂದನೆ ದೊರೆಯದೇ ಇದ್ದಲ್ಲಿ ನ.13ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿವರಿಸಿದರು.

ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿನೇಶ್ ಕುಮಾರ್, ಸದಸ್ಯ ವಿಶ್ವನಾಥ ಶೆಟ್ಟಿ, ಪ್ರಮುಖರಾದ ಇಸ್ಮಾಯಿಲ್, ಮಹಮ್ಮದ್ ಶರೀಫ್, ದಿನೇಶ್ ಕಲ್ಲಿಮಾರ್ ಉಪಸ್ಥಿತರಿದ್ದರು.

ಘನ ವಾಹನ ಸಂಚಾರ ನಿಷೇಧಗೊಂಡಿರುವ ಕಿರು ಸೇತುವೆಯ ಬದಿಯಲ್ಲಿ ನಿರ್ಮಿಸಿದ ಕಮಾನು ಬಿದ್ದಿದೆ. ಕಿರುಸೇತುವೆ ಘನ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಆದರೆ, ಕಲ್ಲು, ಮರಳು ಹೊತ್ತ ಲಾರಿಗಳು ಈ ಕಿರುಸೇತುವೆಯಲ್ಲಿ ಈಗಲೂ ಸಂಚರಿಸುತ್ತಿವೆ. ಈ ಬಗ್ಗೆ ಸ್ಥಳೀಯ ಜನತೆ, ಕೂಲಿ ಕಾರ್ಮಿಕರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಹರಿಕೇಶ ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X