Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ | ಕೆರೆಬೈಲ್‌ನಲ್ಲಿ ಆವರಣ ಗೋಡೆ...

ಉಳ್ಳಾಲ | ಕೆರೆಬೈಲ್‌ನಲ್ಲಿ ಆವರಣ ಗೋಡೆ ಕುಸಿದು ಮನೆ ಸಂಪೂರ್ಣ ಧ್ವಂಸ

ವಾರ್ತಾಭಾರತಿವಾರ್ತಾಭಾರತಿ1 July 2026 2:28 PM IST
share
ಉಳ್ಳಾಲ | ಕೆರೆಬೈಲ್‌ನಲ್ಲಿ ಆವರಣ ಗೋಡೆ ಕುಸಿದು ಮನೆ ಸಂಪೂರ್ಣ ಧ್ವಂಸ
ಸ್ಥಳಾಂತರಗೊಂಡಿದ್ದ ಕುಟುಂಬ; ತಪ್ಪಿದ ಭಾರೀ ಅನಾಹುತ

ಉಳ್ಳಾಲ: ಕಳೆದ ಎರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಮಂಗಳವಾರ ರಾತ್ರಿಯಿಡೀ ಸುರಿದ ಮಳೆಗೆ ಎಸ್ಟೇಟ್ ಒಂದರ ಭಾರೀ ಎತ್ತರದ ಆವರಣ ಗೋಡೆ ಕುಸಿದು ಬಿದ್ದು, ಪಕ್ಕದ ಒಂಟಿ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ತೊಕ್ಕೊಟ್ಟು ಸಮೀಪದ ಕೆರೆಬೈಲ್‌ನಲ್ಲಿ ನಡೆದಿದೆ.

ಕೆರೆಬೈಲ್ ಗುಡ್ಡೆಯ ನಿವಾಸಿ ಕಿಶೋರ್ ಅವರ ಮನೆ ಸಂಪೂರ್ಣ ನೆಲಸಮಗೊಂಡಿದೆ. ಅಪಾಯವನ್ನು ನಿರೀಕ್ಷಿಸಿದ್ದ ಕುಟುಂಬದ ಐವರು ಸದಸ್ಯರು ಎರಡು ವಾರಗಳ ಹಿಂದಷ್ಟೇ ಮನೆಯಿಂದ ಸ್ಥಳಾಂತರಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಘೋರ ಅನಾಹುತವೊಂದು ತಪ್ಪಿದಂತಾಗಿದೆ ಎಂದು ತಿಳಿದು ಬಂದಿದೆ.

ಕೆರೆಬೈಲ್‌ನ ಗುಡ್ಡ ಪ್ರದೇಶದ ತುದಿಯಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಬೃಹತ್ ವಿಸ್ತೀರ್ಣವುಳ್ಳ ಐಷಾರಾಮಿ ಎಸ್ಟೇಟ್ ಸುತ್ತಲೂ ಎತ್ತರದ ಆವರಣ ಗೋಡೆಯನ್ನು ನಿರ್ಮಿಸಲಾಗಿತ್ತು. ಕಳೆದ ವರ್ಷ ಸುರಿದ ಭಾರೀ ಮಳೆಗೆ ಎಸ್ಟೇಟ್‌ನ ಆವರಣ ಗೋಡೆ ಕುಸಿದು ನೆರೆಯ ಕಿಶೋರ್ ಅವರ ಮನೆಯ ಕಡೆಗೆ ವಾಲಿ ನಿಂತಿತ್ತು. ಈ ಬಗ್ಗೆ ಕಿಶೋರ್ ಅವರು ಸ್ಥಳೀಯ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಮುಂಜಾಗೃತಾ ಕ್ರಮವಾಗಿ ನಗರಸಭೆ ಅಧಿಕಾರಿಗಳು ಕಿಶೋರ್ ಅವರ ಕುಟುಂಬ ಸೇರಿದಂತೆ ಎಸ್ಟೇಟ್ ಆವರಣ ಗೋಡೆ ಕುಸಿತದ ಭೀತಿಯಲ್ಲಿದ್ದ ನೆರೆಯ ಹತ್ತು ಮನೆಗಳ ಕುಟುಂಬಗಳನ್ನು ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಿದ್ದರು.

ನಿನ್ನೆ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಎಸ್ಟೇಟ್‌ನ ಆವರಣ ಗೋಡೆ ಕುಸಿದು ಕಿಶೋರ್ ಅವರ ಮನೆಯು ಸಂಪೂರ್ಣವಾಗಿ ನೆಲಸಮಗೊಂಡಿದ್ದು, ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಶಾಂತ್, ನಗರಸಭೆ ಪೌರಾಯುಕ್ತ ಸಂತೋಷ್, ಕಂದಾಯ ನಿರೀಕ್ಷಕ ಪ್ರಮೋದ್ ಹಾಗೂ ಗ್ರಾಮ ಕರಣಿಕ ಅಮ್ಜದ್ ಖಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಲಿ ನಿಂತಿದ್ದ ಎಸ್ಟೇಟ್ ಆವರಣ ಗೋಡೆಯಿಂದ ಅಪಾಯ ಎದುರಾಗುವ ಸಾಧ್ಯತೆಯನ್ನು ನಿರೀಕ್ಷಿಸಿದ್ದ ಕಿಶೋರ್ ಅವರು ತಾಯಿ ಶಕುಂತಲಾ, ಪತ್ನಿ ಭಾರತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಎರಡು ವಾರಗಳ ಹಿಂದೆಯಷ್ಟೇ ಕಾವೂರಿನಲ್ಲಿರುವ ಪತ್ನಿಯ ಮನೆಗೆ ತೆರಳಿ ಅಲ್ಲೇ ನೆಲೆಸಿದ್ದರು ಎಂದು ತಿಳಿದು ಬಂದಿದೆ.

ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಕ್ಕೆ ಆಗ್ರಹ

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಿಶೋರ್ ಅವರು ಮನೆಯನ್ನು ಕಳೆದುಕೊಂಡಿದ್ದು, ಅದೃಷ್ಟವಶಾತ್ ಅವರ ಕುಟುಂಬ ಬದುಕುಳಿದಿದೆ. ಎಸ್ಟೇಟ್‌ನ ಆವರಣ ಗೋಡೆ ಮತ್ತೆ ಕುಸಿಯುವ ಸ್ಥಿತಿಯಲ್ಲಿದ್ದು, ನೆರೆಯ ಕಾಶಿನಾಥ್, ಮಣಿ, ರಝಾಕ್, ನಝೀರ್, ಅಣ್ಣು, ರಾಜ ಕೊಟ್ಟಾರಿ ಹಾಗೂ ಸತ್ಯ ಅವರ ಮನೆಗಳೂ ಅಪಾಯದಲ್ಲಿವೆ. ನಗರಸಭೆ ಅಧಿಕಾರಿಗಳು ತಕ್ಷಣವೇ ಮನೆಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಆಗ್ರಹ ಸ್ಥಳೀಯರಿಂದ ವ್ಯಕ್ತವಾಗಿದೆ.

ಸ್ಥಳಾಂತರಕ್ಕೆ ಸೂಚನೆ

"ವಿಪರೀತ ಮಳೆಯಿಂದ ಕೆರೆಬೈಲ್‌ನಲ್ಲಿ ಕಾಂಪೌಂಡ್ ಕುಸಿದು ಬಿದ್ದು ಮನೆಗೆ ಹಾನಿಗೀಡಾಗಿದೆ. ಈ ಕುಟುಂಬಕ್ಕೆ ಪರಿಹಾರದ ವ್ಯವಸ್ಥೆ ಮಾಡಲಾಗುವುದು. ಈ ಮನೆಯವರು ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಘಟನೆ ನಡೆದ ಸ್ಥಳದಲ್ಲಿ ಅಪಾಯದಂಚಿನಲ್ಲಿರುವ ನಾಲ್ಕು ಕುಟುಂಬಗಳನ್ನು ಸ್ಥಳಾಂತರಿಸಲು ನಗರಸಭೆಗೆ ಸೂಚನೆ ನೀಡಿದ್ದೇನೆ."

- ಪ್ರಶಾಂತ್, ತಹಶೀಲ್ದಾರ್

ಮನೆ ಮಾಲೀಕರು ಪರಿಹಾರ ನೀಡಬೇಕು

ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಸಂತೋಷ್ ಹಾಗೂ ತಹಶೀಲ್ದಾರ್ ಪ್ರಶಾಂತ್ ಅವರಿಗೆ ಸೂಚನೆ ನೀಡಿದ್ದೇನೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಉದ್ಯಮಿಗಳು ಹಾಗೂ ಶ್ರೀಮಂತರು ಕಟ್ಟಡ ನಿರ್ಮಾಣ ಮಾಡಬೇಕು. ಈ ಘಟನೆಯಿಂದ ತೊಂದರೆಗೊಳಗಾದವರಿಗೆ ಮನೆ ಮಾಲೀಕರು ಕೂಡ ಪರಿಹಾರ ನೀಡಬೇಕು ಎಂದು ತಿಳಿಸಿದ್ದಾರೆ.

ಈ ಕುರಿತು ಅಧಿಕಾರಿಗಳು, ಮನೆ ಮಾಲೀಕರು ಹಾಗೂ ಊರವರು ಇಂದು ಸಂಜೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ. ಪ್ರತಿಯೊಂದಕ್ಕೂ ಸರ್ಕಾರ ಅಥವಾ ಅಧಿಕಾರಿಗಳೇ ಹೇಳಬೇಕು ಎಂಬ ಮನೋಭಾವನೆ ಜನರಲ್ಲಿ ಇರಬಾರದು. ದೊಡ್ಡ ಮನೆ ಕಟ್ಟುವವರಲ್ಲಿ ಜನಪರ ಕಾಳಜಿ ಇರಬೇಕು. ಹಾನಿಗೊಳಗಾದ ಮನೆಗೆ ಸರ್ಕಾರ ಪರಿಹಾರ ನೀಡಲಿದೆ. ಇದಕ್ಕೆ ಅಧಿಕಾರಿಗಳು ಅಗತ್ಯ ವ್ಯವಸ್ಥೆ ಮಾಡಲಿದ್ದಾರೆ. ಆದರೆ ಹೆಚ್ಚುವರಿ ಪರಿಹಾರವನ್ನು ಘಟನೆಗೆ ಕಾರಣವಾದ ಮನೆ ಮಾಲೀಕರು ನೀಡಬೇಕು. ಯಾವುದೇ ಮನೆಗೆ ಹಾನಿಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ.

– ಯು.ಟಿ. ಖಾದರ್, ಆರೋಗ್ಯ ಸಚಿವ

Tags

UllalKerebail
share
ವಾರ್ತಾಭಾರತಿ
ವಾರ್ತಾಭಾರತಿ
Next Story
X