ಉಳ್ಳಾಲ | ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ : ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊರ್ವ ಫ್ಯಾನ್ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕುತ್ತಾರ್ ನಿವಾಸಿ ಜೀವನ್ (30) ಎಂದು ಗುರುತಿಸಲಾಗಿದೆ.
ಮಾನಸಿಕ ಖಿನ್ನತೆಯಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story