Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಹಿಂಪ ಮುಖಂಡ ಶ್ರೀಕಾಂತ್ ಶೆಟ್ಟಿಯ...

ವಿಹಿಂಪ ಮುಖಂಡ ಶ್ರೀಕಾಂತ್ ಶೆಟ್ಟಿಯ ದ್ವೇಷ ಭಾಷಣ, ಪ್ರತೀಕಾರಕ್ಕೆ ಪ್ರಚೋದನೆ ಖಂಡನಾರ್ಹ: ಎಸ್ ಡಿಪಿಐ

ಪೊಲೀಸ್ ಇಲಾಖೆಯ ಅನುಮತಿಯಿಲ್ಲದೆ ಸಂಘಪರಿವಾರದ ಅಂಗಸಂಸ್ಥೆಗಳ "ಬಜ್ಪೆ ಚಲೋ" ಜನಾಗ್ರಹ ಸಭೆ

ವಾರ್ತಾಭಾರತಿವಾರ್ತಾಭಾರತಿ26 May 2025 3:16 PM IST
share
ವಿಹಿಂಪ ಮುಖಂಡ ಶ್ರೀಕಾಂತ್ ಶೆಟ್ಟಿಯ ದ್ವೇಷ ಭಾಷಣ, ಪ್ರತೀಕಾರಕ್ಕೆ ಪ್ರಚೋದನೆ ಖಂಡನಾರ್ಹ: ಎಸ್ ಡಿಪಿಐ

ಮಂಗಳೂರು: ಬಜ್ಪೆಯಲ್ಲಿ ಮೇ 25 ರವಿವಾರ ದಂದು ಪೊಲೀಸ್ ಇಲಾಖೆಯ ಯಾವುದೇ ಅನುಮತಿಯಿಲ್ಲದೆ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದಂತಹ ಸಂಘಪರಿವಾರದ ಅಂಗಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ "ಬಜ್ಪೆ ಚಲೋ" ಜನಾಗ್ರಹ ಸಭೆಯಲ್ಲಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಹತ್ಯೆಯನ್ನು ಕೇಂದ್ರೀಕರಿಸಿ, ವಿಶ್ವ ಹಿಂದೂ ಪರಿಷತ್‌ನ ಮುಖಂಡ ಶ್ರೀಕಾಂತ್ ಶೆಟ್ಟಿಯವರು ದ್ವೇಷ ಭಾಷಣ ಮಾಡಿ, ಪ್ರತೀಕಾರಕ್ಕೆ ಪ್ರಚೋದನೆ ನೀಡಿರುವುದು ಖಂಡನೀಯ ಎಂದು ಎಸ್ ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎಸ್ ಡಿಪಿಐ, ಈ ರೀತಿಯ ಭಾಷಣವು ಸಾಮಾಜಿಕ ಸಾಮರಸ್ಯವನ್ನು ಕದಡುವ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯನ್ನು ಹೊಂದಿದೆ. ಕಾನೂನಿನ ಚೌಕಟ್ಟಿನಲ್ಲಿ ಯಾವುದೇ ಸಭೆ ಅಥವಾ ಕಾರ್ಯಕ್ರಮವನ್ನು ಆಯೋಜಿಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ, ಈ ಸಭೆಯನ್ನು ಯಾವುದೇ ಅನುಮತಿಯಿಲ್ಲದೆ ನಡೆಸಿರುವುದು ಕಾನೂನಿನ ಉಲ್ಲಂಘನೆಯಾಗಿದೆ ಎಂದು ಟೀಕಿಸಿದೆ.

ಈ ಘಟನೆಯ ಆಯೋಜಕರಾದ ಶ್ರೀಕಾಂತ್ ಶೆಟ್ಟಿ, ಶಿವಾನಂದ ಮೆಂಡನ್ ಮತ್ತು ಇತರ ಸಂಘಟನೆಗಳ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮಂಗಳೂರು ನಗರ ಜಿಲ್ಲಾ ಸಮಿತಿಯು ಮಂಗಳೂರು ಪೊಲೀಸ್ ಆಯುಕ್ತರಲ್ಲಿ ಒತ್ತಾಯಿಸಿದೆ.


ಸಾಮಾಜಿಕ ಸಾಮರಸ್ಯವನ್ನು ಕಾಪಾಡಲು ಮತ್ತು ದ್ವೇಷ ಭಾಷಣದಂತಹ ಕೃತ್ಯಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಯು ತಕ್ಷಣ ಕಾನೂನು ಕ್ರಮಕೈಗೊಂಡು, ಆಯೋಜಕರ ವಿರುದ್ಧ ಸೂಕ್ತ ತನಿಖೆ ನಡೆಸಿ, ಶಿಕ್ಷಾರ್ಹ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಕಾನೂನಿನ ಎದುರು ಎಲ್ಲರೂ ಸಮಾನರು ಎಂಬ ತತ್ವವನ್ನು ಎತ್ತಿಹಿಡಿಯಲು ಮತ್ತು ಸಮಾಜದಲ್ಲಿ ಶಾಂತಿ ಕಾಪಾಡಲು ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ನಾವು ಮನವಿ ಮಾಡುತ್ತೇವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ಅಬ್ದುಲ್ ಜಲೀಲ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X