Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ...

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ26 Jun 2026 12:34 PM IST
share
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ : ವಿಜಯೇಂದ್ರ

ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಇಬ್ಬರೂ ಜಯಶಾಲಿಯಾಗಿದ್ದಾರೆ. ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಇದರಿಂದ ನಾನು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಬಹಳ ನೋವನ್ನು ಅನುಭವಿಸುವಂತಾಗಿದೆ. ಬಿಜೆಪಿ ಶಾಸಕರಿಂದ ಅಡ್ಡ ಮತದಾನವು ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.

ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಆಗಬೇಕೆಂದು ಹೇಳಿದ್ದು ನಿಜ ಎಂದ ಅವರು, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ- ಕಿವಿಮಾತಿನನ್ವಯ ಅವರೆಲ್ಲರ ಮಾತಿಗೆ ಗೌರವ ಕೊಟ್ಟು ಕ್ಷೇತ್ರದ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಲು ಬಂದಿರುವುದಾಗಿ ತಿಳಿಸಿದರು.

ಸಾಕಷ್ಟು ಅಪಪ್ರಚಾರ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಎಲ್ಲೋ ಒಂದು ಕಡೆ ನಾನೇ ಅಡ್ಡ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದೇನೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣ, ಪತ್ರಿಕಾ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾದುದು ನಮ್ಮವರೇ ಎಂಬ ಅರಿವು ನನಗಿದೆ ಎಂದರು.

ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, "2018ರಲ್ಲಿ 17 ಶಾಸಕರು ಯಡಿಯೂರಪ್ಪ ನಾಯಕತ್ವಕ್ಕೆ ಬಂದರು. ಆಗ ಒಳ್ಳೆಯ ಸರ್ಕಾರ ಕೊಟ್ಟೆವು. ಈಶ್ವರಪ್ಪ ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಎಂಜಾಯ್ ಮಾಡಿದರು. ಗುತ್ತಿಗೆದಾರನ ಆತ್ಮಹತ್ಯೆಯಂತಹ ಘಟನೆಗಳೂ ನಡೆದಿತ್ತು. ಆದರೆ ಅವರಿಗೆ ಎಲ್ಲವೂ ಮರೆತುಹೋಗಿದೆ" ಎಂದು ಕೆ.ಎಸ್. ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

"ಬಿಜೆಪಿಯ 63 ಶಾಸಕರಿಗೆ ಹೇಳುತ್ತೇನೆ, ಕಾಂಗ್ರೆಸ್ ಬೇರೆ ಬೇರೆ ಹೆಸರನ್ನು ತೇಲಿ ಬಿಡುತ್ತಿದೆ. ಇದರಿಂದ ಕಾರ್ಯಕರ್ತರು ಅನುಮಾನದಿಂದ ನೋಡುವಂತಾಗಿದೆ. ಅಡ್ಡಮತದಾನ ಮಾಡಿದವರು ಯಾರೇ ಆದರೂ ಸತ್ಯ ಹೊರಗೆ ಬಂದೇ ಬರುತ್ತದೆ. ಕೇಂದ್ರ ನಾಯಕತ್ವವೂ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಅಡ್ಡ ಮತದಾನದ ಚರ್ಚೆಗೆ ಇವತ್ತಿಗೆ ಇತಿಶ್ರೀ ಹಾಡುತ್ತೇವೆ. ರಾಜ್ಯದಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವುದೇ ಮುಖ್ಯ ಗುರಿಯಾಗಿದೆ. ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವಿದೆ" ಎಂದರು.

ಪ್ರಧಾನಿ ಮೋದಿ, ಪಕ್ಷದ ಹಿಂದಿನ ಅಧ್ಯಕ್ಷ ಅಮಿತ್ ಶಾ ಮತ್ತು ಪಕ್ಷದ ಹಿರಿಯರ ಆಶೀರ್ವಾದದಿಂದ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷನಾಗಿ ಇಂಥ ಕೀಳು ಮಟ್ಟದ ಕೆಲಸ ಮಾಡುವ ಪ್ರಶ್ನೆಯೇ ಉದ್ಭವವಾಗದು. ವಿಜಯೇಂದ್ರ- ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧವೂ ಇಲ್ಲ. ಯಾವುದೇ ಆತ್ಮೀಯತೆಯೂ ನಮ್ಮ ಮಧ್ಯೆ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರಿಗೆ ಕೊಡಬೇಕಾದ ಗೌರವವನ್ನು ಕೊಟ್ಟಿದ್ದೇನೆ. ಒಬ್ಬ ಶಾಸಕನಾಗಿ ರಾಜ್ಯದ ಮುಖ್ಯಮಂತ್ರಿಗೆ ಕೊಡಬೇಕಾದ ಗೌರವವನ್ನು ಕೊಡಬೇಕಾಗುತ್ತದೆ ಎಂದು ತಿಳಿಸಿದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X