ವಿಟ್ಲ : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ(ಜೂ.16) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುತ್ತೂರಿನ ಚಿಕ್ಕಮುಡ್ನೂರು ನಿವಾಸಿ, ಮೊಹಮ್ಮದ್ ಸಲಾಂ ಅಲಿಯಾಸ್ ಕೆ. ಎಂ. ಸಲಾಂ ಅಲಿಯಾಸ್ ಡಾಲರ್ ಸಲಾಂ ಬಂಧಿತ ಆರೋಪಿ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಮನೆಗಳ್ಳತನ, ಕಳವು ಪ್ರಕರಣ ಮತ್ತು 2022ರ ಸಾಲಿನಲ್ಲಿ ಮತ್ತೊಂದು ಕಳವು ಪ್ರಕರಣ ದಾಖಲಾಗಿದ್ದವು.
ಈ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದ ಈತ, ನಂತರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು.
ವಿಟ್ಲ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story




