Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ...

ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿಯನ್ನು ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು !

ವಾರ್ತಾಭಾರತಿವಾರ್ತಾಭಾರತಿ9 Feb 2025 10:59 PM IST
share
ಮಂಗಳೂರು: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿಯನ್ನು ಹೊರ ತೆಗೆದ ವೆನ್ಲಾಕ್ ಆಸ್ಪತ್ರೆಯ ವೈದ್ಯರು !

ಮಂಗಳೂರು: ಹನ್ನೆರಡರ ಹರೆಯದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ನಗರದ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಸ್ಸಾಂ ಮೂಲದ ಬಾಲಕ ಕಮಲ್ ಹಸನ್(12) ಇದೀಗ ಸಕಾಲದಲ್ಲಿ ದೊರೆತ ಚಿಕಿತ್ಸೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬಾಲಕ ಕಮಲ್ ಹಸನ್ ಹೆತ್ತವರು ಕೊಡಗು ಜಿಲ್ಲೆಯ ಮಡಿಕೇರಿಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಸಂಜೆಯ ಹೊತ್ತಿಗೆ ಮನೆ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕನು ಕತ್ತರಿಸಲ್ಪಟ್ಟ ತೆಂಗಿನ ಗರಿಯ ಮೇಲೆ ಬಿದ್ದ ರಬಸಕ್ಕೆ ತೆಂಗಿನ ಗರಿಯು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಪೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಮಡಿಕೇರಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಪ್ರಾಥಮಿಕ ಚಿಕಿತ್ಸೆ ಮೂಲಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆ ತರಲಾಗಿತ್ತು ಎನ್ನಲಾಗಿದೆ.

ಎರಡು ಗಂಟೆಗಳ ಶಸ್ತ್ರಚಿಕಿತ್ಸೆ: ಮಧ್ಯರಾತ್ರಿ ಹೊತ್ತಿಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಬಾಲಕ ಕಮಲ್ ಹಸನ್‌ನನ್ನು ದಾಖಲಿಸಲಾಗಿತ್ತು. ದೇಹಕ್ಕೆ ತೆಂಗಿನ ಗರಿ ಹೊಕ್ಕಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುರೇಶ್ ಪೈ ನೇತೃತ್ವದ ತಂಡವು ಇದನ್ನು ಸವಾಲಾಗಿ ಸ್ವೀಕರಿಸಿ ರಾತ್ರಿ 1:30 ರಿಂದ 3:30ರ ತನಕ ಶಸ್ತ್ರ ಚಿಕಿತ್ಸೆ ನಡೆಸಿ ಬಾಲಕನ ಕುತ್ತಿಗೆಯಿಂದ ಕೆಳ ಭಾಗಕ್ಕೆ ಸುಮಾರು 20 ಸೆ.ಮೀನಷ್ಟು ಕೆಳಕ್ಕೆ ಇಳಿದಿದ್ದ ತೆಂಗಿನ ಗರಿ ಮತ್ತು ಸ್ಟೀಲ್ ಚೈನ್‌ನ್ನು ಹೊರತೆಗೆದಿದ್ದಾರೆ.

ಬಾಲಕ ಇದೀಗ ಈಗ ಐಸಿಯುನಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಮತ್ತು ಡಿಎಂಒ ಡಾ. ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಬಹಳ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದೆ. ಒಂದು ವೇಳೆ ಇದು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದಿದ್ದರೆ, 10 ಲಕ್ಷ ರೂ. ತನಕ ಖರ್ಚಾಗುತ್ತಿತ್ತು. ವೆನ್‌ವಾಕ್ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆಯ ಯಾವುದೇ ಖರ್ಚಿಲ್ಲದೆ ನಡೆಸಲಾಗಿದೆ. ವೈದ್ಯರ ಸಾಧನೆಯನ್ನು ಡಿಎಂಒ ಡಾ.ಶಿವಪ್ರಕಾಶ್ ಶ್ಲಾಘಿಸಿದ್ದಾರೆ.

ಅಪರೂಪದ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ತಮ್ಮ ಮಗನ ಜೀವ ಉಳಿಸಿರುವ ವೆನ್ಲಾಕ್ ಆಸ್ಪತ್ರೆಯ ಎಲ್ಲ ವೈದ್ಯರಿಗೆ ಅಸ್ಸಾಂ ಮೂಲದ ಬಾಲಕನ ಪೋಷಕರಾದ ಅನ್ವರ್ ಹಾಗೂ ಅಸ್ಮಾ ಖಾತೂನ್ ಕೃತಜ್ಞತೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X