Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಿಎಸ್‌ಟಿ ಇಳಿಕೆಗೆ ಕರಾವಳಿಯ ಬಿಜೆಪಿ...

ಜಿಎಸ್‌ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? : ಐವನ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ23 Oct 2025 2:50 PM IST
share
ಜಿಎಸ್‌ಟಿ ಇಳಿಕೆಗೆ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳ ಕೊಡುಗೆ ಏನು? :  ಐವನ್ ಡಿಸೋಜಾ

ಮಂಗಳೂರು, ಅ. 23 ಕೇಂದ್ರ ಸರ್ಕಾರ ಜಿಎಸ್‌ಟಿ ತೆರಿಗೆ ಕಡಿತಗೊಳಿಸಿರುವುದು ಜನತೆಗೆ ದೀಪಾವಳಿ ಗಿಫ್ಟ್ ಎಂದು ಕರಪತ್ರ ಮುದ್ರಿಸಿ ಅಂಚೆ ಮೂಲಕ ಕಳುಹಿಸುತ್ತಿರುವ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಕರಾವಳಿಯ ಬಿಜೆಪಿ ಜನಪ್ರತಿನಿಧಿಗಳಿಂದ ಜಿಎಸ್‌ಟಿ ಇಳಿಕೆಗೆ ಮಾಡಿರುವ ಹೋರಾಟವೇನು ಎಂಬುದನ್ನು ತಿಳಿಸಲಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಸವಾಲು ಹಾಕಿದ್ದಾರೆ.

ಗುರುವಾರ ಸುದ್ದಿಗೋಷ್ಟಿಯಲ್ಲಿ ಈ ಸವಾಲು ಹಾಗಿರುವ ಐವನ್ ಡಿಸೋಜಾ, ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ದುಬಾರಿ ಸ್ಲ್ಯಾಬ್‌ಗಳಲ್ಲಿ ಜಿಎಸ್‌ಟಿ ವಸೂಲಿ ಮಾಡುತ್ತಿದ್ದರೂ ಮಾತನಾಡದ ಬಿಜೆಪಿ ಶಾಸಕರು ಹಾಗೂ ಸಂಸದರು ಈಗ ಮಾತ್ರ ದೀಪಾವಳಿ ಗಿಫ್ಟ್ ಎನ್ನುತ್ತಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದಾರೆ.

ಜಿಎಸ್‌ಟಿಯಡಿ ಕಳೆದ ಎಂಟು ವರ್ಷಗಳಲ್ಲಿ ವಸೂಲಿ ಮಾಡಿದ ಜಿಎಸ್‌ಟಿ ಮೊತ್ತ ಎಷ್ಟು ಹಾಗೂ ಅದನ್ನು ಯಾವುದಕ್ಕೆಲ್ಲ ಖರ್ಚುಮಾಡಲಾಗಿದೆ? ಈ ವೇಳೆ ರಾಜ್ಯಕ್ಕೆ ನೀಡಿದ ಯೋಜನೆ ಏನು ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ಈವರೆಗೆ ರಾಜ್ಯ ಸರ್ಕಾರ ಪಾವತಿ ಮಾಡಿದ ಜಿಎಸ್‌ಟಿ ಬಗ್ಗೆ ವಿವರ ನೀಡಬೇಕು. ಕೇಂದ್ರದಿಂದ ರಾಜ್ಯಕ್ಕೆ ೧೧,೪೯೫ ಕೋಟಿ ರು. ಜಿಎಸ್‌ಟಿ ಮೊತ್ತ ಪಾವತಿ ಬಾಕಿ ಇದ್ದು, ಇದರ ಬಗ್ಗೆ ಬಿಜೆಪಿ ಶಾಸಕರು, ಸಂಸದರು ಮಾತನಾಡುತ್ತಿಲ್ಲ. ಇಂತಹ ದೀಪಾವಳಿ ಗಿಫ್ಟ್ ಎಂಬ ಕರಪತ್ರಗಳಿಗೆ ಜನತೆ ಸೊಪ್ಪು ಹಾಕುವುದಿಲ್ಲ ಎಂದರು.

ಪುಕ್ಸಟೆ ಪ್ರಚಾರವನ್ನು ಪ್ರಧಾನಿ ಮೋದಿಯವರ ಫೋಟೋ ಬಳಸಿ ಮಾಡುವ ಸ್ಥಳೀಯ ಶಾಸಕರಿಗೆ ಅದನ್ನು ನೇರವಾಗಿ ಜರಿಗೆ ಕೊಡಲು ಆಗದೆ ಅಂಚೆಯವರ ಮೂಲಕ ಕಳುಹಿಸುತ್ತಿದ್ದಾರೆ. ಅಂಚೆಯವರು ಕೆಲ ಮನಗಳಿಗೆ ನಾಲ್ಕೈದರಂತೆ ಈ ಕರಪತ್ರಗಳನ್ನು ಇಟ್ಟು ತೆರಳಿದ್ದಾರೆ ಎಂದವರು ಆಕ್ಷೇಪಿಸಿದರು.

ಜಿಎಸ್‌ಟಿ ಕಡಿಮೆ ಮಾಡಿದ ಯಶಸ್ಸು ಬಿಜೆಪಿಗೆ ಅಲ್ಲ, ಕಾಂಗ್ರೆಸ್‌ಗೆ ಸಲ್ಲಬೇಕು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ಸತತ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಜಿಎಸ್‌ಟಿ ತೆರಿಗೆ ಇಳಿಕೆ ಮಾಡಿದೆ. ಇದರಲ್ಲಿ ಬಿಜೆಪಿ ಸಾಧನೆ ಏನೂ ಇಲ್ಲ ಎಂದರು. ಜಿಎಸ್‌ಟಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಇಲ್ಲಿನ ಸಂಸದರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ಸಿಎಂ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯ ರಸ್ತೆ ಹದಗೆಟ್ಟಿದ್ದು, ರೈಲ್ವೆ ಕಾಮಗಾರಿ ಹಳ್ಳ ಹಿಡಿದಿದೆ. ಆದರೆ ರಾಜ್ಯ ಸರ್ಕಾರ ಪಂಚಗ್ಯಾರಂಟಿ ಸಹಿತ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಿದೆ ಎಂದರು.

ಮುಖಂಡರಾದ ಶಶಿಧರ ಹೆಗ್ಡೆ, ಭಾಸ್ಕರ ರಾವ್, ನಾಗೇಂದ್ರ ಕುಮಾರ್, ಸತೀಶ್ ಪೆಂಗಲ್, ಹೇಮತ್ ಗರೋಡಿ, ಮನೀಶ್ ಬೋಳಾರಂ, ಚಂದ್ರಹಾಸ್ ಪೂಜಾರಿ ಕೋಡಿಕಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X