Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.16ರಂದು ಬೆಳ್ತಂಗಡಿಯಲ್ಲಿ ಮಹಿಳಾ...

ಡಿ.16ರಂದು ಬೆಳ್ತಂಗಡಿಯಲ್ಲಿ ಮಹಿಳಾ ಜಾಥಾ- ನ್ಯಾಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ24 Nov 2025 3:12 PM IST
share
ಡಿ.16ರಂದು ಬೆಳ್ತಂಗಡಿಯಲ್ಲಿ ಮಹಿಳಾ ಜಾಥಾ- ನ್ಯಾಯ ಸಮಾವೇಶ

ಮಂಗಳೂರು, ನ.24: ದೆಹಲಿಯ ನಿರ್ಭಯ ಪ್ರಕರಣದ ದಿನವಾದ ಡಿ. 16ರಂದು ಅತ್ಯಾಚಾರ ವಿರೋಧಿ ದಿನ ಆಚರಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ‘ಕೊಂದವರು ಯಾರು’ ಎಂಬ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದವರು ಯಾರು ಎಂಬ ಸತ್ಯವನ್ನು ಹೊರತರುವ ದಿಕ್ಕಿನಲ್ಲಿ ಎಸ್‌ಐಟಿ ತನಿಖೆ ನಡೆಯಬೇಎಂದು ಒತ್ತಾಯ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಒದಗಿಸುವ ನಿಟ್ಟಿನಲ್ಲಿ ಈ ಸಮಾವೇಶ ಹಾಗೂ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕೊಂದವರು ಯಾರು ಎಂಬ ಆಂದೋಲನ ಆಗಸ್ಟ್‌ನಲ್ಲಿ ಆರಂಭಿಸಲಾಗಿದೆ. ಧರ್ಮಸ್ಥಳದಲ್ಲಿ ನಡೆದ ಪ್ರಕರಣಳ ಸಂತ್ರಸ್ತರ ಕುಟುಂಬಗಳೊಂದಿಗೆ ನಿಲ್ಲುವುದು ನಮ್ಮ ಉದ್ದೇಶ ಎಂದರು.

ಕಳೆದ 13 ವರ್ಷಗಳಿಂದ ಮಹಿಳಾ ಸಂಘಟನೆಗಳು ಅತ್ಯಾಚಾರ ವಿರೋಧಿ ದಿನವನ್ನಾಗಿ ಆಚರಿಸುತ್ತಿವೆ. ಕಳೆದ ನಾಲ್ಕು ದಶಕಗಳಿಂದ ಮಹಿಳೆಯರ ಹಕ್ಕುಗಳು ಮತ್ತು ಘಟನೆಗಾಗಿ ವಿವಿಧ ಮಹಿಳಾ ಸಂಘಟನೆಗಳು ಕೆಲಸ ನಿರ್ವಹಿಸುತ್ತಿದ್ದು, ಧರ್ಮಸ್ಥಳದಲ್ಲಿ ನಡೆದಿರುವ ಪ್ರಕರಣಗಳಿಗೆ ಸಂಬಂಧಿಸಿ ದೂರು ನೀಡಿದ ಹಾಗೂ ನೊಂದವರ ಕುಟುಂಬಗಳನು ನಾವು ಸಂಪರ್ಕಿಸಿ ಸಾಂತ್ವಾನ ಹೇಳಿದ್ದೇವೆ. ಎಸ್‌ಐಟಿಯಿಂದ ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದ್ದು, ಸರಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಈ ಹೋರಾಟ ನಡೆಯಲಿದೆ ಎಂದು ಅಭಿಯಾನದ ಸದಸ್ಯೆ ಮಲ್ಲಿಗೆ ತಿಳಿಸಿದರು.

ಎಸ್‌ಐಟಿ ರಚನೆಯ ಆದೇಶವು ಸ್ಪಷ್ಟವಾಗಿ ಹೇಳುವಂತೆ ವಿಚಾರಣೆ ಕೇವಲ ಸಾಮೂಹಿಕ ಹೆಣ ಹೂಳುವಿಕೆಯ ಕುರಿತಾಗಿ ಮಾತ್ರವಲ್ಲ. ಇನ್ನಿತರ ಎಲ್ಲ ವಿಚಾರಗಳ ಸಮಗ್ರ ತನಿಖೆ ನಡೆಸಬೇಕು ಎಂಬುದು ನಮ್ಮ ಆಗ್ರಹ. ಎಸ್‌ಐಟಿ ವಿಚಾರಮೆಯು ಸಂಪೂರ್ಣವಾಗಿ ಮಹಿಳೆಯರು ಮತ್ತಿತರ ಅಮಾಯಕ ನೊಂದವರಿಗೆ ನ್ಯಾಯ ದೊರಕುವ ಸುತ್ತ ಕೇಂದ್ರೀಕೃತವಾಗಿರಬೇಕೇ ಹೊರತು ಧಾರ್ಮಿಕ ಅಥವಾ ರಾಜಕೀಯ ವಿಚಾರಗಳ ಸುತ್ತ ಅಲ್ಲ ಎಂಬುದನ್ನು ಗಟ್ಟಿದನಿಯಲ್ಲಿ ನಾವು ಪ್ರತಿಪಾದಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಅಭಿಯಾನದ ಸದಸ್ಯೆ ಜ್ಯೋತಿ ಮಾತನಾಡಿ, ಧರ್ಮಸ್ಥಳ ಪ್ರಕರಣಗಳಿಗೆ ಸಂಬಂಧಿಸಿ ದೂರುದಾರರು ಹಾಗೂ ಸಾಕ್ಷಿಗಳನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದ್ದು, ಎಸ್‌ಐಟಿಯಿಂದ ಪ್ರಾಮಾಣಿಕ ತನಿಖೆ ನಡೆಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಮಹಿಳಾ ನಿಯೋಗ ಭೇಟಿ ಮಾಡಿ ಒತ್ತಾಯಿಸಿದ್ದು, ಪ್ರಾಮಾಣಿಕ ತನಿಖೆಯ ಭರವಸೆ ನೀಡಿದ್ದಾರೆ ಎಂದರು.

ಗೋಷ್ಟಿಯಲ್ಲಿ ರೈತ ಸಂಘದ ಮುಖಂಡೆ ಅನಸೂಯಮ್ಮ ಅರಲಾಲುಸಂದ್ರ, ಕಲಾವಿದೆ ಮತ್ತು ಲೇಖಕಿ ಗೀತಾ ಸುರತ್ಕಲ್, ಸೌಜನ್ಯ ಪರ ಹೋರಾಟಗಾರರಾದ ಶಶಿಕಲಾ, ಮಹಿಳಾ ಪರ ಹೋರಾಟಗಾರರಾದ ಸುನೀತಾ ಲಂಬಾಣಿ, ಭಾಗ್ಯಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X