ದಾವಣಗೆರೆ | ವಿವಾದಿತ ಬ್ಯಾನರ್ ಅಳವಡಿಕೆ ಪ್ರಕರಣ: 15 ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ | PC : freepik
ದಾವಣಗೆರೆ, ಸೆ.27: ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ನಡೆದಂತಹ ವಾಗ್ವಾದಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಆರೋಪಿಗಳನ್ನು ಬಂಧಿಸಲಾಗಿದೆ.
ಘಟನೆ ಸಂಬಂಧ ಅಝಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 4 ಪ್ರತ್ಯೇಕ ತಂಡಗಳನ್ನು ರಚಿಸಿ, ಪ್ರಕರಣಗಳಿಗೆ ಸಂಬಂಧ ಇಲ್ಲಿವರೆಗೆ 15 ಆರೋಪಿತರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
ನಗರದ ಶಾಂತಿ ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ನಾಗರಿಕರು ಜಿಲ್ಲಾ ಪೊಲೀಸ್ ಜೊತೆಯಲ್ಲಿ ಸಹಕರಿಸಬೇಕು ಹಾಗೂ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ, ಪೋಸ್ಟರ್ಗಳನ್ನು ಹಾಕಬಾರದು. ಒಂದು ವೇಳೆ ಹಾಗೇನಾದರೂ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
Next Story





