Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ...

ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕ್ರಮ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ24 Dec 2023 10:48 PM IST
share
ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕ್ರಮ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಇಲ್ಲಿನ ಎಂಬಿಎ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ 24ನೇ ಅಖಿಲ ಭಾರತ ವೀರಶೈವ ಮಹಾಸಭಾದ ಅಧಿವೇಶನದ ಸಮಾರಂಭದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯುತ ಸಮಾಜ ಗಟ್ಟಿಯಾದ ಸಮಾಜ, ಒಗ್ಗಟ್ಟು, ಇತರೆ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋದಾಗ ನಮಗೆ ಶಕ್ತಿ ಬರಲಿದೆ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕಿದೆ ಎಂದರು.

ʼವೀರಶೈವ ಲಿಂಗಾಯುತ ಸಮಾಜವನ್ನು ಓಬಿಸಿ ಪಟ್ಟಿಯಲ್ಲಿ ಸೇರಿಸಬೇಕೆನ್ನುವುದು ಬಹುದಿನಗಳ ಹೋರಾಟ, ಅದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಶರಣ ಪರಂಪರೆ ಸಮಾಜದ ಪರಿಕಲ್ಪನೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಮಾನತೆ ನೀಡುವುದಾಗಿದೆ. 12ನೇ ಶತಮಾನದಲ್ಲಿ ಎಲ್ಲರನ್ನೂ ಜತೆಗೆ ಕರೆದುಕೊಂಡು ನಮ್ಮ ಸಮಾಜ ಕೊಂಡೊಯ್ಯಲ್ಲಿದೆ. ಎಲ್ಲಾ ಮಠಾಧೀಶರನ್ನು ಬಳಸಿಕೊಂಡು ವಿಸ್ತಾರವಾಗಿ ಬೆಳೆಯುತ್ತಿದೆʼ ಎಂದರು.

ಶಾಮನೂರು ಶಿವಶಂಕರಪ್ಪನವರು ವೀರಶೈವ ಲಿಂಗಾಯುತ ಸಮುದಾಯವನ್ನು ಒಂದುಗೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಸಾಗುತ್ತಿದ್ದಾರೆ. ನಾವುಗಳು ನಮ್ಮೆಲ್ಲರ ಭಿನ್ನಾಭಿಪ್ರಾಯ ಬಿಟ್ಟು ಮುಂದೆ ಸಾಗಬೇಕೆನ್ನುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಬೇಕಿದೆ. ನಮ್ಮ ಒಳಪಂಗಡಗಳ ಗುದ್ದಾಟದಿಂದ ಮುಂದೆ ಬಂದಾಗ ಮಾತ್ರ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಇಂತಹ ಅಧಿವೇಶನಗಳಿಗೆ ಅರ್ಥ ಬರುತ್ತದೆ ಎಂದರು.

ಯಾವುದೇ ಸಚಿವರು, ಜನಪ್ರತಿನಿಧಿಗಳು ಯಾವುದೇ ಧರ್ಮಗಳನ್ನು ತುಷ್ಠಿಕರಣ ಮಾಡದೇ, ಅತಿಯಾಗಿ ಓಲೈಸದೇ ಲಭ್ಯವಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಹಂಚಿಕೆ ಮಾಡಿ ಎಲ್ಲರ ವಿಶ್ವಾಸ ಗಳಿಸಬೇಕು. ಕಾಯಕವೇ ಕೈಲಾಸ ಎನ್ನುವ ಮಾತಿನಂತೆ ಶಾಂತಿಯ ನೆಲೆಬೀಡಾದ ಕರ್ನಾಟಕವನ್ನು ಬೆಳೆಸಲು ನಮ್ಮ ಶಕ್ತಿಯನ್ನು ಬಳಸೋಣ. ಶಾಮನೂರು ಶಿವಶಂಕರಪ್ಪನವರು ಪಕ್ಷಬೇಧ ಮರೆತು ಎಲ್ಲರನ್ನು ಒಟ್ಟಾಗಿ ಸೇರಿಸಿದ್ದಾರೆ. ಮಠಮಾನ್ಯಗಳ ಮಠಾಧೀಶರನ್ನು ಇಲ್ಲಿ ಸೇರಿಸಿದ್ದಾರೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್‍ಕರ್ ಮಾತನಾಡಿ, ಇಲ್ಲಿನ ನಿರ್ಣಯಗಳನ್ನು ಸರ್ಕಾರದ ಮಂತ್ರಿಯಾಗಿ ಸಹಕಾರ ನೀಡುತ್ತೇನೆ. 12ನೇ ಶತಮಾನದ ಬಸವಣ್ಣರ ವಂಶಸ್ಥರು ನಾವು. ಯಾವುದೇ ಬೇಧ, ಬಾವವಿಲ್ಲದೇ ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಚಿವ ಈಶ್ವರ್ ಖಂಡ್ರೆ, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶ್ರೀಗಳು, ಪಾಂಡೋಮಟ್ಟಿ ಶ್ರೀಗಳು ಸೇರಿದಂತೆ ಇತರರು ಇದ್ದರು.

ಮಹಾಧಿವೇಶನದಲ್ಲಿ ಮಂಡಿಸಲಾದ ನಿರ್ಣಯಗಳು

► ದೇಶದ ಅಖಂಡತೆ, ಏಕತೆ, ಸಮಗ್ರತೆ, ಭದ್ರತೆಯ ರಕ್ಷಣೆಗೆ "ಮಹಾಸಭೆ'' ಹಾಗೂ ನಮ್ಮ ಸಮಾಜ ಸದಾ ಕಟಿಬದ್ಧವಾಗಿದ್ದು, ಅಂತಹ ಯಾವುದೇ ಹೋರಾಟ, ಪ್ರಯತ್ನಗಳಿಗೆ ಈ ಹಿಂದಿನಂತೆಯೇ ಪ್ರೋತ್ಸಾಹ, ಬೆಂಬಲ ನೀಡುತ್ತದೆ ಎಂದು ಈ ಮಹಾಧಿವೇಶನವು ಪುನರುಚ್ಚರಿಸುತ್ತದೆ.

► ವಿಶ್ವಗುರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು

► ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಒಬಿಸಿ ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಮತ್ತು ಕೇಂದ್ರ ಸರ್ಕಾರ ಈ ಶಿಫಾರಸನ್ನು ಅಂಗೀಕರಿಸಬೇಕು

► ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಬೇಕು.

► ಧರ್ಮದ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಸುವಂತೆ ನಿರ್ಣಯ

► ಎಲ್ಲ ರೈತರಿಗೆ ಅನುಕೂಲ ಆಗುವಂತೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಒತ್ತಾಯ

► ಶ್ರೀ ನಿಜಲಿಂಗಪ್ಪನವರ ಪುಣ್ಯ ಸ್ಮರಣೆಯ ದಿನವಾದ ಆಗಸ್ಟ್ 8, 2024ರೊಳಗೆ ಸ್ಮಾರಕ ನಿರ್ಮಾಣಕ್ಕೆ ಕ್ರಮವಹಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X