Davanagere | ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ

ದಾವಣಗೆರೆ : ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡರೊಬ್ಬರ ಮೃತದೇಹ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿನಲ್ಲಿ ರವಿವಾರ ಬೆಳಿಗ್ಗೆ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಸಂಕೋಳ ಚಂದ್ರ ಶೇಖರ್ (56) ಎಂದು ಗುರುತಿಸಲಾಗಿದೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯದ ಆಧಾರದ ಮೇರೆಗೆ ಹದಡಿ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಂಕೋಳ ಚಂದ್ರಶೇಖರ್ ಮಾಡಿದ ಸಾಲದ ಹಿನ್ನಲೆಯಲ್ಲಿ ಕೌಟುಂಬಿಕ ಕಲಹ ನಡೆದಿತ್ತು ಎನ್ನಲಾಗಿದೆ. ಮನನೊಂದ ಪುತ್ರ ಹಾಗೂ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಬಳಿಕ ಚಂದ್ರಶೇಖರ್ ಜಮೀನಿಗೆ ತೆರಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story





