Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. Davangere | ಶ್ರೀಮಂತ ಯುವಕರನ್ನು...

Davangere | ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಅಪಹರಿಸಿ ಹಣಕ್ಕೆ ಬೇಡಿಕೆ ಆರೋಪ: 10 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ30 Sept 2026 8:02 PM IST
share
Davangere | ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಅಪಹರಿಸಿ ಹಣಕ್ಕೆ ಬೇಡಿಕೆ ಆರೋಪ: 10 ಮಂದಿಯ ಬಂಧನ

ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಅಪಹರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದಡಿ 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಟ್ಟೆ ವ್ಯಾಪಾರಿಯೊಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಬಂಧಿತರ ಮೇಲಿದೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಣಕಾಸಿನ ವ್ಯವಹಾರದ ನೆಪ:

ದಾವಣಗೆರೆಯ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ವ್ಯವಹಾರದ ಕುರಿತು ಮಾತನಾಡಬೇಕಿದೆ ಎಂದು ಪರಿಚಿತನಾದ ಅಬ್ಬಾಸ್ ಎಂಬಾತ ಶಾಮನೂರು ಸಮೀಪದ ಸಮುದಾಯ ಭವನದ ಬಳಿ ಕರೆಸಿಕೊಂಡಿದ್ದ ಎನ್ನಲಾಗಿದೆ. ಅಲ್ಲಿಗೆ ಕಾರಿನಲ್ಲಿ ಬಂದ ಆರೋಪಿಗಳು ವ್ಯಾಪಾರಿಯನ್ನು ಆಂಜನೇಯ ಬಡಾವಣೆಯಲ್ಲಿರುವ ಮನೆಯೊಂದಕ್ಕೆ ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

10 ಲಕ್ಷಕ್ಕೆ ಬೇಡಿಕೆ:

ಮನೆಯೊಂದರಲ್ಲಿ ವ್ಯಾಪಾರಿಯ ಮೇಲೆ ಮರದ ತುಂಡು ಹಾಗೂ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ತಂದೆಗೆ ಕರೆ ಮಾಡಿ 10 ಲಕ್ಷ ಹಣ ತರುವಂತೆ ಒತ್ತಡ ಹೇರಲಾಗಿದೆ ಎನ್ನಲಾಗಿದೆ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.


ಲೈವ್ ಲೊಕೇಶನ್‌ನಿಂದ ಸುಳಿವು:

ಪ್ರಕರಣದಲ್ಲಿ ಸಂತ್ರಸ್ತನ ಮೊಬೈಲ್‌ನ ಲೈವ್ ಲೊಕೇಶನ್ ಪೊಲೀಸರಿಗೆ ಹಾಗೂ ಕುಟುಂಬಸ್ಥರಿಗೆ ಪ್ರಮುಖ ಸುಳಿವು ನೀಡಿದೆ ಎನ್ನಲಾಗಿದೆ. ಸಂತ್ರಸ್ತ ಪ್ರತಿದಿನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಲೈವ್ ಲೊಕೇಶನ್ ಹಂಚಿಕೊಳ್ಳುತ್ತಿದ್ದ ಕಾರಣ, ಕುಟುಂಬಸ್ಥರು ಅದನ್ನು ಆಧರಿಸಿ ಆಂಜನೇಯ ಬಡಾವಣೆ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಕುಟುಂಬಸ್ಥರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಸೇರುತ್ತಿರುವುದನ್ನು ಗಮನಿಸಿದ ಆರೋಪಿಗಳು ಸಂತ್ರಸ್ತನನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.


10 ಮಂದಿ ಬಂಧನ:

ಘಟನೆ ಬಳಿಕ ಸಂತ್ರಸ್ತ ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಗಂಗಾರಾಮ ಪವಾರ್ ಅಲಿಯಾಸ್ ಬಬ್ಲು ಸೇರಿದಂತೆ ಒಟ್ಟು 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.

ಬಂಧಿತರ ಪೈಕಿ ಗಂಗಾರಾಮ ಪವಾರ್ ವಿರುದ್ಧ ದಾವಣಗೆರೆ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

Tags

DavangereRansom
share
ವಾರ್ತಾಭಾರತಿ
ವಾರ್ತಾಭಾರತಿ
Next Story
X