Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಒಳಮೀಸಲಾತಿ ಅನ್ವಯ ನೇಮಕಾತಿಗೆ ಒತ್ತಾಯ |...

ಒಳಮೀಸಲಾತಿ ಅನ್ವಯ ನೇಮಕಾತಿಗೆ ಒತ್ತಾಯ | ಮಾದಿಗ ಸಮುದಾಯ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ7 March 2026 12:35 AM IST
share
ಒಳಮೀಸಲಾತಿ ಅನ್ವಯ ನೇಮಕಾತಿಗೆ ಒತ್ತಾಯ | ಮಾದಿಗ ಸಮುದಾಯ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ

ದಾವಣಗೆರೆ : ನ್ಯಾ.ನಾಗಮೋಹನದಾಸ್ ವರದಿಯಂತೆ ಒಳಮೀಸಲಾತಿ ಕಲ್ಪಿಸಬೇಕು, ಅದರಂತೆ ಸರಕಾರಿ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯ ಶುಕ್ರವಾರ ಕರೆ ನೀಡಿದ್ದ ‘ದಾವಣಗೆರೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೇ ಬೀದಿಗೆ ಇಳಿದ ಮಾದಿಗ ಸಮುದಾಯ ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು. ನಗರದ ಪ್ರಮುಖ ವೃತ್ತಗಳಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿತ್ತು. ನಂತರ ಬೈಕ್‌ಗಳ ಮೂಲಕ ಸಂಚರಿಸಿ ಘೋಷಣೆಗಳನ್ನು ಕೂಗಿದರು.

ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬಸ್‌ಗಳನ್ನು ತಡೆದು ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಹೋರಾಟ ಮಾಡುತ್ತಿದ್ದೇವೆ, ಬೆಂಬಲ ನೀಡಿ ಎಂದರು.

ಗಾಂಧಿ ವೃತ್ತವನ್ನು ನಾಲ್ಕು ತಾಸಿಗೂ ಹೆಚ್ಚು ಕಾಲ ಬಂದ್ ಮಾಡಲಾಯಿತು. ಈ ವೇಳೆ ವಾಹನ ಸವಾರರು ಪರದಾಡಿದ ಘಟನೆಗಳು ಕಂಡು ಬಂದವು. ಜಯದೇವ ವೃತ್ತ, ಅಂಬೇಡ್ಕರ್ ವೃತ್ತ, ಮಹಾನಗರ ಪಾಲಿಕೆ, ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ವಿದ್ಯಾರ್ಥಿ ಭವನ, ಸಂಗೊಳ್ಳಿ ರಾಯಣ್ಣ ವೃತ್ತ, ಶಾಮನೂರು ಸೇರಿ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಿದರು.

ನಂತರ ಎಸಿ ಕಚೇರಿ ಬಳಿ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

ಈ ವೇಳೆ ಮುಖಂಡ ಆಲೂರು ನಿಂಗರಾಜ ಮಾತನಾಡಿ, ಮಾದಿಗ ಸಮಾಜ 35 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ. ಸಮಾಜದ ಹೋರಾಟ ಪರಿಗಣಿಸಿ ನಾಗಮೋಹನದಾಸ್ ವರದಿಯಂತೆ ಮೀಸಲಾತಿ ನೀಡಬೇಕು. ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 56 ಸಾವಿರ ಹುದ್ದೆಗಳನ್ನು ರಾಜ್ಯ ಸರಕಾರ ಒಳಮೀಸಲಾತಿಯಡಿ ನೇಮಕಾತಿ ಮಾಡಬೇಕು. ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ. 17ಕ್ಕೆ ಏರಿಕೆ ಮಾಡಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಇಲ್ಲವೇ ಶೇ.15ರ ಮಿತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು. ಒಂದು ವೇಳೆ ಸರಕಾರ ಕಡೆಗಣಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಾದಿಗ ದಂಡೋರ ಸಮಿತಿಯ ಎಚ್.ಸಿ.ಗುಡ್ಡಪ್ಪಮಾತನಾಡಿ, ನ್ಯಾ.ನಾಗಮೋಹನದಾಸ್ ಅವರ ವರದಿಯಂತೆ ನೇಮಕಾತಿ ನಡೆಯಬೇಕು. ಮುಖ್ಯಮಂತ್ರಿಯವರು ಸಚಿವರಾದ ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಪರಮೇಶ್ವರ ಅವರ ಮಾತು ಕೇಳಿದರೆ ಅಥವಾ ಒತ್ತಡಕ್ಕೆ ಒಳಗಾದರೆ ನಿಮ್ಮ ವಿರುದ್ಧವೇ ಹೋರಾಟಕ್ಕೆ ಇಳಿಯುತ್ತೇವೆ ಎಂದು ಎಚ್ಚರಿಸಿದರು.

ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, ಸಾಮಾಜಿಕ ನ್ಯಾಯದಂತೆ ಎಲ್ಲ ಸಮುದಾಯಗಳಿಗೂ ಮೀಸಲಾತಿ ಸಿಗಬೇಕು. ನಮ್ಮ ಸಮುದಾಯ ಬಹಳ ಹಿಂದುಳಿದ ಸಮುದಾಯವಾಗಿದೆ. ನಮಗೆ ನ್ಯಾಯಸಿಗಬೇಕು. ಈಗ ಶಾಂತಿಯುತ ಹೋರಾಟ ನಡೆಸುತ್ತಿದ್ದೇವೆ. ಸರಕಾರ ಎಚ್ಚೆತ್ತುಕೊಂಡು ಒಳಮೀಸಲಾತಿ ಜಾರಿ ಮಾಡಬೇಕು ಎಂದರು.

ಲಿಂಗರಾಜ ಗಾಂಧಿನಗರ ಮಾತನಾಡಿದರು.

ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾದಿಗ ಸಮುದಾಯ ಕರೆ ನೀಡಿದ್ದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ಸರಕಾರ ಕೂಡಲೇ ಒಳಮೀಸಲಾತಿ ಅಡಿಯಲ್ಲಿ ನೇಮಕಾತಿ ನಡೆಸಿ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.


ಮಾದಿಗ ದಂಡೋರ ಸಮಿತಿ, ದಲಿತ ಸಮುದಾಯ ದಾವಣಗೆರೆ ಬಂದ್‌ಗಾಗಿ ಕರೆ ನೀಡಿದ್ದವು. ಅದರಂತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲು ನೋಟಿಸ್ ನೀಡಲಾಗಿತ್ತು. ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಭದ್ರತೆಗೆ ಕೆಎಸ್‌ಆರ್‌ಪಿ, ಡಿಎಸ್‌ಆರ್ ತುಕಡಿ ನೇಮಕ ಮಾಡಲಾಗಿತ್ತು.

-ಶೇಖರ್ ಎಚ್.ಟಿ., ಎಸ್ಪಿ ದಾವಣಗೆರೆ


Tags

Davangere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X