ದಾವಣಗೆರೆ: ಹೃದಯಾಘಾತದಿಂದ ಬಾಡಿ ಬಿಲ್ಡರ್ ಮೃತ್ಯು

ಸುಶೀಲ್ ಕುಮಾರ್
ದಾವಣಗೆರೆ: ಬಾಡಿ ಬಿಲ್ಡರ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ಬುಧವಾರ ನಡೆದಿದೆ.
ಕೆ.ಟಿ.ಜೆ ನಗರದ ನಿವಾಸಿ ಸುಶೀಲ್ ಕುಮಾರ್ (26) ಹೃದಯಾಘಾತದಿಂದ ಮೃತಪಟ್ಟ ಬಾಡಿ ಬಿಲ್ಡರ್.
ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಸುಶೀಲ್ ಕುಮಾರ್ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.
ಬೆಳಿಗ್ಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದ ತಕ್ಷಣ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story




