Davangere by-election : ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಡಿಸಿಎಂ ಡಿಕೆಶಿ, ಮಾಜಿ ಕ್ರಿಕೆಟಿಗ ಅಝರುದ್ದೀನ್ ರೋಡ್ ಶೋ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರ ಮಂಗಳವಾರ (ಎ.7) ಅಂತ್ಯಗೊಂಡಿದ್ದು, ಇನ್ನೂ ಎ.8ರಿಂದ ಮನೆ ಮನೆ ಪ್ರಚಾರ ಮಾತ್ರ ನಡೆಯಲಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಹಿನ್ನಲೆಯಲ್ಲಿ ಕಾಂಗ್ರೆಸ್, ಬಿಜೆಪಿ, ಎಎಪಿ, ಎಸ್‌ಡಿಪಿಐ ಸೇರಿದಂತೆ ವಿವಿಧ ಪಕ್ಷಗಳು ಭರ್ಜರಿ ರೋಡ್ ಶೋ ನಡೆಸಿದವು.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಕ್ರಿಕೆಟಿಗ ಅಝರುದ್ದೀನ್, ಸಂಸದ ನಾಸೀರುದ್ದೀನ್,ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಡಾ.ಸುಧಾಕರ, ಶಾಸಕರಾದ ರಿಝ್ವಾನ್ ಅರ್ಷದ್, ಸಲೀ ಅಹಮದ್, ಹ್ಯಾರಿಸ್, ಶಿವಲಿಂಗೇಗೌಡ ಸೇರಿದಂತೆ ಹಲವು ಮುಖಂಡರು ದೊಡ್ಡಪೇಟೆ, ವಿಠಲಮಂದಿರ, ಹಳೇ ಬೇತೂರು ರಸ್ತೆ ಸೇರಿದಂತೆ ವಿವಿಧಡೆ ಪ್ರಚಾರ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಸವಣ್ಣನವರ ಪ್ರತಿಮೆಗೆ ಪುಷ್ಪಹಾರ ಹಾಕಿ, ನಗರ ದೇವತೆ ದುರ್ಗಾಂಬಿಕಾ ದೇವಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.
ತೆಲಂಗಾಣ ಸಚಿವ ಹಾಗೂ ಮಾಜಿ ಕ್ರಿಕೆಟಿಗ ಅಝರುದ್ದೀನ್ ಅವರು ತೆರದ ವಾಹನದಲ್ಲಿ ರೋಡ್ ಶೋ ನಡೆಸಿದರು.




