ದಾವಣಗೆರೆ | ಭದ್ರಾ ಕಾಲುವೆಗೆ ಬಿದ್ದ ಕಾರು: ಇಬ್ಬರು ಮೃತ್ಯು; ನಾಲ್ವರು ಪಾರು

ದಾವಣಗೆರೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿಬಿದ್ದ ಪರಿಣಾಮ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ರವಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ದಾವಣಗೆರೆ ನಗರ ನಿವಾಸಿಗಳಾದ ಮಲ್ಲಿಕಾರ್ಜುನ್ (29) ಹಾಗೂ ಸಿದ್ದೇಶ್ (38) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ನಾಲ್ವರು ಈಜಿ ಕಾಲುವೆಯ ದಡ ಸೇರಿದ್ದಾರೆ.
ಮಂಗಳೂರಿಗೆ ಪ್ರವಾಸ ತೆರಳಿದ್ದ ಆರು ಮಂದಿ ಸ್ನೇಹಿತರು ರವಿವಾರ ರಾತ್ರಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿದ್ದೆಯ ಮಂಪರಿನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಚನ್ನಗಿರಿ ತಾಲೂಕಿನ ಸೂಳೆಕೆರೆ ಸಮೀಪದ ಭದ್ರಾ ಕಾಲುವೆಗೆ ಹೊಂದಿಕೊಂಡ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿಬಿದ್ದಿದೆ. ಈ ವೇಳೆ ಕಾರಿನ ಬಾಗಿಲು ತೆರೆದು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಸಂತೇಬೆನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
Next Story





