Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಹಂತ ಹಂತವಾಗಿ ಬರಪೀಡಿತ ತಾಲೂಕುಗಳ ಘೋಷಣೆ;...

ಹಂತ ಹಂತವಾಗಿ ಬರಪೀಡಿತ ತಾಲೂಕುಗಳ ಘೋಷಣೆ; 200ಕ್ಕೂ ಹೆಚ್ಚು ತಾಲೂಕುಗಳು ಪಟ್ಟಿಗೆ ಸೇರುವ ಸಾಧ್ಯತೆ : ಜಿ.ಪರಮೇಶ್ವರ್‌

► "101 ತಾಲೂಕುಗಳಲ್ಲಿ 18,000 ಕೋಟಿ ರೂ. ನಷ್ಟದ ಅಂದಾಜು" ► "ರೈತರ ಸಾಲಮನ್ನಾ ಮಾಡುವಂತೆ ಕೇಂದ್ರಕ್ಕೆ ಮನವಿ"

ವಾರ್ತಾಭಾರತಿವಾರ್ತಾಭಾರತಿ20 Sept 2026 2:58 PM IST
share
G. Parameshwara

ದಾವಣಗೆರೆ : ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಒಂದೇ ಹಂತದಲ್ಲಿ ಘೋಷಿಸುವುದಿಲ್ಲ. ನಿಗದಿತ ಮಾನದಂಡಗಳಿಗೆ ಅರ್ಹವಾಗುವ ತಾಲೂಕುಗಳನ್ನು ಹಂತ ಹಂತವಾಗಿ ಪರಿಶೀಲಿಸಿ, ಗ್ರೌಂಡ್ ಟ್ರೂಥಿಂಗ್ ನಡೆಸಿದ ಬಳಿಕ ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ. ಪರಮೇಶ್ವರ್‌ ಅವರು ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬಳಿಕ 24 ತಾಲೂಕುಗಳನ್ನು ಸೇರಿಸಲಾಗಿದೆ. ಇನ್ನೂ 52 ತಾಲೂಕುಗಳನ್ನು ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಘೋಷಿಸುತ್ತೇವೆ. ಮುಂದಿನ ಹಂತದಲ್ಲಿ ಸುಮಾರು 50 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಸ್ತುತ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಮುಂಗಾರು ಅವಧಿ ಪೂರ್ಣಗೊಳ್ಳುವವರೆಗೂ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಜಗಳೂರು ಸೇರಿದಂತೆ ಈಗ ಪಟ್ಟಿಯಲ್ಲಿ ಇಲ್ಲದ ತಾಲೂಕುಗಳೂ ಮುಂದಿನ ಹಂತಗಳಲ್ಲಿ ಅರ್ಹತೆ ಪಡೆದಲ್ಲಿ ಘೋಷಣೆಯಾಗಲಿವೆ. ಹೀಗಾಗಿ ತಮ್ಮ ತಾಲೂಕು ಇನ್ನೂ ಪಟ್ಟಿಗೆ ಸೇರಿಲ್ಲ ಎಂಬ ಆತಂಕ ಯಾರಿಗೂ ಬೇಡ ಎಂದು ಹೇಳಿದರು.

ಬರ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆ : ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಮೂರು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಬರದಿಂದ ಉಂಟಾಗಿರುವ ನಷ್ಟ, ರೈತರಿಗೆ ನೆರವು ಹಾಗೂ ಕೇಂದ್ರ ಸರ್ಕಾರದಿಂದ ದೊರೆಯಬೇಕಾದ ಪರಿಹಾರದ ಕುರಿತು ಸದನದಲ್ಲಿ ವಿಪಕ್ಷಗಳ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.

ಬರ ಪರಿಹಾರ ಮತ್ತು ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕುರಿತು ಚರ್ಚಿಸಲಾಗುವುದು. ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರ್ಕಾರದ ಮುಂದೆ ರಾಜ್ಯದ ಬೇಡಿಕೆಗಳನ್ನು ಮಂಡಿಸುವ ಉದ್ದೇಶವಿದೆ ಎಂದರು.

101 ತಾಲೂಕುಗಳಲ್ಲಿ ₹18,000 ಕೋಟಿ ನಷ್ಟದ ಅಂದಾಜು : ಮೊದಲ ಹಂತದಲ್ಲಿ ಘೋಷಿಸಲಾದ 101 ತಾಲೂಕುಗಳಲ್ಲಿ ಸುಮಾರು ₹18,000 ಕೋಟಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಸುಮಾರು ₹3,500 ಕೋಟಿ ಪರಿಹಾರ ಕೋರಲಾಗಿದೆ. ಇದು ಮೊದಲ ಮೆಮೊರಾಂಡಂ ಆಗಿದ್ದು, ಮುಂದಿನ ಹಂತಗಳಲ್ಲಿ ಘೋಷಣೆಯಾಗುವ ತಾಲೂಕುಗಳ ನಷ್ಟದ ವಿವರಗಳನ್ನು ಒಳಗೊಂಡ ಎರಡನೇ ಹಾಗೂ ಮೂರನೇ ಮೆಮೊರಾಂಡಂಗಳನ್ನು ಸಹ ಸಲ್ಲಿಸಲಾಗುವುದು ಎಂದು ಹೇಳಿದರು.

ಕಳೆದ ವರ್ಷ ರಾಜ್ಯದಲ್ಲಿ ಸುಮಾರು ₹39,000 ಕೋಟಿ ನಷ್ಟವಾಗಿದ್ದು, ₹18,000 ಕೋಟಿ ಪರಿಹಾರ ಕೋರಲಾಗಿತ್ತು. ಆದರೆ ಸುಮಾರು ₹3,400 ಕೋಟಿ ಮಾತ್ರ ದೊರೆತಿತ್ತು ಎಂದು ಅವರು ತಿಳಿಸಿದರು.

ರೈತರು ತೀವ್ರ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದೇಶದ ರೈತರ ನೆರವಿಗೆ ಬರುವಂತಹ ನಿರ್ಧಾರ ಕೈಗೊಳ್ಳಬೇಕು. ಹಿಂದೆ ಡಾ. ಮನಮೋಹನ್ ಸಿಂಗ್ ಅವರು ದೇಶದ ರೈತರ 72 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡುವ ತೀರ್ಮಾನ ಕೈಗೊಂಡಿದ್ದರು. ಈ ಬಾರಿಯೂ ರೈತರ ಸಾಲಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಕೇಂದ್ರದಿಂದ ಮಲತಾಯಿ ಧೋರಣೆ : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲು ಹಾಗೂ ವಿವಿಧ ಯೋಜನೆಗಳ ಅನುದಾನಗಳು ಸಮರ್ಪಕವಾಗಿ ಬಿಡುಗಡೆಯಾಗುತ್ತಿಲ್ಲ. ಜಲಜೀವನ್‌ ಮಿಷನ್‌ ಯೋಜನೆಗೆ ಇನ್ನೂ ₹17 ಸಾವಿರ ಕೋಟಿ ಬರಬೇಕು. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದರು.

Tags

drought-hitG Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X