Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ:...

ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ: AIMIM ಆರೋಪ

ವಾರ್ತಾಭಾರತಿವಾರ್ತಾಭಾರತಿ7 March 2026 10:16 AM IST
share
ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ: AIMIM ಆರೋಪ

ದಾವಣಗೆರೆ: ಕರ್ನಾಟಕ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನ ನಿರಾಶಾದಾಯಕವಾಗಿದ್ದು, ಇದು ಅಲ್ಪಸಂಖ್ಯಾತರ ಮೇಲಿನ ಅನ್ಯಾಯವಾಗಿದೆ ಎಂದು AIMIM ಪಕ್ಷ ಖಂಡನೆ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ AIMIM ದಾವಣಗೆರೆ ಜಿಲ್ಲಾಧ್ಯಕ್ಷ ಮಹಮ್ಮದ್ ಅಲಿ ಶೋಯಬ್ ಅವರು, ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ 7,900 ಕೋಟಿ ರೂ. ಅನುದಾನ ನೀಡಬೇಕೆಂಬ ಬೇಡಿಕೆ ಇದ್ದರೂ ಸರ್ಕಾರ ಕೇವಲ 4,013.78 ಕೋಟಿ ರೂ. ಮಾತ್ರ ಮೀಸಲಿಟ್ಟಿದೆ. ಇದರಿಂದ ಸುಮಾರು 3,900 ಕೋಟಿ ರೂ ಕೊರತೆ ಉಂಟಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಹಲವು ಪ್ರಮುಖ ಯೋಜನೆಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು 8 ಕೋಟಿ ರೂ. ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ಹಾಗೆಯೇ ಸ್ಕಾಲರ್‌ಶಿಪ್ ಹಾಗೂ ಶುಲ್ಕ ಮರುಪಾವತಿ ಯೋಜನೆಗೆ ನೀಡುತ್ತಿದ್ದ 338 ಕೋಟಿ ರೂ. ಅನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ. ಕಾನೂನು ಪದವೀಧರರಿಗೆ ನೀಡುತ್ತಿದ್ದ 2.36 ಕೋಟಿ ರೂ. ಸ್ಟೈಪೆಂಡ್ ಕೂಡ ರದ್ದುಪಡಿಸಲಾಗಿದೆ ಎಂದು ಅವರು ಹೇಳಿದರು.

ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗೂ ಕಡಿತ ಅನುದಾನ ಮಾಡಲಾಗಿದೆ. ಕಾಲೋನಿ ಅಭಿವೃದ್ಧಿ ಯೋಜನೆಗೆ ನೀಡುತ್ತಿದ್ದ 400 ಕೋಟಿ ರೂ. ಅನ್ನು 325 ಕೋಟಿ ರೂ.ಗೆ ಇಳಿಸಲಾಗಿದ್ದು, ಮುಖ್ಯಮಂತ್ರಿಗಳ ಅಲ್ಪಸಂಖ್ಯಾತ ವಿಶೇಷ ಅಭಿವೃದ್ಧಿ ಯೋಜನೆಗೆ ನೀಡುತ್ತಿದ್ದ 724 ಕೋಟಿ ರೂ. ಅನ್ನು ಕೂಡ 325 ಕೋಟಿ ರೂ.ಗೆ ಕಡಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಬಜೆಟ್‌ನಲ್ಲಿ “ಮೌಲಾನಾ ಅಬುಲ್ ಕಲಾಂ ಆಝಾದ್ ಶಾಲೆ ಮತ್ತು ಗರ್ಲ್ಸ್ ಕಾಲೇಜು” ಸ್ಥಾಪಿಸುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಇದುವರೆಗೆ ಅದರ ಅನುಷ್ಠಾನದಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಯುವಕರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಬಲೀಕರಣಕ್ಕೆ ಸಂಬಂಧಿಸಿದ ಯಾವುದೇ ವಿಶೇಷ ಯೋಜನೆ ಕಾಣಿಸದಿರುವುದು ಮತ್ತೊಂದು ಆತಂಕಕಾರಿ ವಿಷಯವಾಗಿದೆ ಎಂದರು.

ಇನ್ನೊಂದೆಡೆ ಆಡಳಿತಾತ್ಮಕ ಮತ್ತು ಬ್ಯೂರೋಕ್ರಸಿ ವೆಚ್ಚಗಳನ್ನು ಹೆಚ್ಚಿಸಿರುವ ಸರ್ಕಾರ, ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿತಗೊಳಿಸಿರುವುದು ನಿಧಿ ಹಂಚಿಕೆ ಬಗ್ಗೆ ಪ್ರಶ್ನೆ ಹುಟ್ಟಿಸುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ಅಲ್ಪಸಂಖ್ಯಾತ ಆಯೋಗಕ್ಕೆ ಕೇವಲ 3.91 ಲಕ್ಷ ರೂ. ಹೆಚ್ಚಳ ನೀಡಿರುವುದು ಅರ್ಥಹೀನವಾಗಿದ್ದು, ಆಯೋಗವನ್ನು ಬಲಪಡಿಸಲು ಕನಿಷ್ಠ 20 ಕೋಟಿ ರೂ. ಅನುದಾನ ನೀಡಬೇಕಿತ್ತು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ತಮ್ಮ ಬಜೆಟ್ ಭಾಷಣದಲ್ಲಿ “ಮುಸ್ಲಿಂ” ಎಂಬ ಪದವನ್ನೇ ಉಲ್ಲೇಖಿಸದಿರುವುದು ಮತ್ತು ಬಜೆಟ್ ದಾಖಲೆಗಳಲ್ಲಿ ಮೌಲಾನಾ ಅಬುಲ್ ಕಲಾಂ ಆಝಾದ್ ಅವರ ಚಿತ್ರ ಕಾಣಿಸದಿರುವುದು ಕೂಡ ಆತಂಕಕಾರಿ ಸಂಗತಿಗಳಾಗಿವೆ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಕನಿಷ್ಠ 7,900 ಕೋಟಿ ರೂ. ಅನುದಾನ ನೀಡಬೇಕು, ಸ್ಕಾಲರ್‌ಶಿಪ್ ಹಾಗೂ ಶುಲ್ಕ ಮರುಪಾವತಿ ಯೋಜನೆಗಳನ್ನು ತಕ್ಷಣ ಪುನಃ ಜಾರಿಗೆ ತರಬೇಕು, ಮೌಲಾನಾ ಅಬುಲ್ ಕಲಾಂ ಆಝಾದ್ ಶಾಲೆ ಮತ್ತು ಗರ್ಲ್ಸ್ ಕಾಲೇಜು ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಅಲ್ಪಸಂಖ್ಯಾತ ಆಯೋಗಕ್ಕೆ ಕನಿಷ್ಠ ₹20 ಕೋಟಿ ಅನುದಾನ ನೀಡಬೇಕು ಹಾಗೂ ಯುವಕರಿಗೆ ವಿಶೇಷ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಬಲೀಕರಣ ಯೋಜನೆಗಳನ್ನು ಘೋಷಿಸಬೇಕು ಎಂದು AIMIM ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X