Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಕೆಪಿಎಸ್ ಸಿ ಪರೀಕ್ಷೆಗೆ ಹೈಟೆಕ್ ಭದ್ರತೆ;...

ಕೆಪಿಎಸ್ ಸಿ ಪರೀಕ್ಷೆಗೆ ಹೈಟೆಕ್ ಭದ್ರತೆ; ಜಾಮರ್ ಅಳವಡಿಕೆ

ದಾವಣಗೆರೆಯ 13 ಕೇಂದ್ರಗಳಲ್ಲಿ 7,842 ಅಭ್ಯರ್ಥಿಗಳಿಂದ ಪರೀಕ್ಷೆ | ವೆಬ್ ಕಾಸ್ಟ್ ಮೂಲಕ ನಿಗಾ

ವಾರ್ತಾಭಾರತಿವಾರ್ತಾಭಾರತಿ15 Nov 2026 10:28 AM IST
share
ಕೆಪಿಎಸ್ ಸಿ ಪರೀಕ್ಷೆಗೆ ಹೈಟೆಕ್ ಭದ್ರತೆ; ಜಾಮರ್ ಅಳವಡಿಕೆ

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಬೆಳಗ್ಗೆ 10 ಗಂಟೆಗೆ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಆರಂಭಗೊಂಡಿತು.

ಜಿಲ್ಲೆಯಲ್ಲಿ ಒಟ್ಟು 7,842 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಜಿಲ್ಲಾಡಳಿತವು ಹೈಟೆಕ್ ಭದ್ರತಾ ವ್ಯವಸ್ಥೆ ಸೇರಿದಂತೆ ಬಿಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಸಿಸಿಟಿವಿ, ವೆಬ್ಕಾಸ್ಟ್ ಮೂಲಕ ಕಣ್ಗಾವಲು: ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೆಪಿಎಸ್ ಸಿ ಕೇಂದ್ರ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ಸ್ಮಾರ್ಟ್ಸಿಟಿ ಕಮಾಂಡ್ ಸೆಂಟರ್ನಿಂದ ನೇರ ವೆಬ್ಕಾಸ್ಟ್ ಮೂಲಕ ಪರೀಕ್ಷಾ ಪ್ರಕ್ರಿಯೆಯ ಮೇಲೆ ನಿಗಾ ವಹಿಸಲಾಗುತ್ತಿದೆ. ಇಲೆಕ್ಟ್ರಾನಿಕ್ ಸಾಧನಗಳ ಬಳಕೆ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಗಳನ್ನು ಅಳವಡಿಸಲಾಗಿದೆ.

ಮೂರು ಪ್ರತಿಗಳ ಒಎಂಆರ್ ಶೀಟ್: ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಬಾರಿ ಮೂರು ಪ್ರತಿಗಳ ಒಎಂಆರ್ ಉತ್ತರ ಪತ್ರಿಕೆ ವ್ಯವಸ್ಥೆ ಮಾಡಲಾಗಿದೆ. ಒಂದು ಪ್ರತಿಯನ್ನು ಅಭ್ಯರ್ಥಿಗಳು ತಮ್ಮ ಬಳಿ ಇಟ್ಟುಕೊಳ್ಳಬಹುದು. ಮತ್ತೊಂದು ಪ್ರತಿಯನ್ನು ಕೆಪಿಎಸ್ಸಿ ಸ್ಕ್ಯಾನಿಂಗ್ ಗೆ ಕಳುಹಿಸಲಾಗುತ್ತದೆ. ಮೂರನೇ ಪ್ರತಿಯನ್ನು ಜಿಲ್ಲಾಧಿಕಾರಿಗಳ ಭದ್ರತೆಯಲ್ಲಿ ಕಾಯ್ದಿರಿಸಲಾಗುತ್ತದೆ.

ಪರೀಕ್ಷೆ ಮುಗಿದ ತಕ್ಷಣ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್ ಗಳನ್ನು ಸೀಲ್ ಮಾಡಿ, 24 ಗಂಟೆಯೂ ಪೊಲೀಸ್ ಹಾಗೂ ಸಿಸಿಟಿವಿ ಭದ್ರತೆಯಿರುವ ಜಿಲ್ಲಾ ಖಜಾನೆಗೆ ರವಾನಿಸಲಾಗುತ್ತದೆ. ಪರೀಕ್ಷೆ ಮುಗಿದ 2ರಿಂದ 3 ಗಂಟೆಗಳ ಒಳಗಾಗಿ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಪೂರ್ಣಗೊಳಿಸಿ ಅಪ್ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಸಿಬ್ಬಂದಿ ನಿಯೋಜನೆ, ಮೊಬೈಲ್ ನಿಷೇಧ:

ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು, ಐದು ರೂಟ್ ಗಳಿಗೆ 10 ರೂಟ್ ಅಧಿಕಾರಿಗಳನ್ನು ಹಾಗೂ ನಾಲ್ವರು ವೀಕ್ಷಕರನ್ನು ನಿಯೋಜಿಸಲಾಗಿದೆ. ಮೇಲ್ವಿಚಾರಕರನ್ನು ಹೊರತುಪಡಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಯಾರಿಗೂ ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ. ಅಭ್ಯರ್ಥಿಗಳ ಸಮಯ ಪಾಲನೆಗಾಗಿ ಪ್ರತಿ ಕೊಠಡಿಯಲ್ಲೂ ಗಡಿಯಾರ ಅಳವಡಿಸಲಾಗಿದೆ. ಅಭ್ಯರ್ಥಿಗಳು ತರುವ ಮೊಬೈಲ್ ಹಾಗೂ ಪುಸ್ತಕಗಳನ್ನು ಇರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ವೈದ್ಯಕೀಯ ಸೌಲಭ್ಯ: ಶ್ರವಣ ಸಾಧನಗಳ ದುರ್ಬಳಕೆ ತಡೆಯಲು ಹಾಗೂ ತುರ್ತು ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ 13 ಪರೀಕ್ಷಾ ಕೇಂದ್ರಗಳಲ್ಲೂ ಇಎನ್ ಟಿ ವೈದ್ಯರಿಂದ ತಪಾಸಣೆ ನಡೆಸುವ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭಗಳಿಗಾಗಿ ಆ್ಯಂಬುಲೆನ್ಸ್ ಗಳನ್ನೂ ಸಿದ್ಧವಾಗಿಡಲಾಗಿದೆ.

ಜೆರಾಕ್ಸ್ ಅಂಗಡಿಗಳು ಬಂದ್:

ಪರೀಕ್ಷಾ ಕೇಂದ್ರಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ 200ರಿಂದ 300 ಮೀಟರ್ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ಪರೀಕ್ಷೆ ನಡೆಯುವ ಅವಧಿಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ.

ವಸ್ತ್ರ ಸಂಹಿತೆ ಜಾರಿ:

ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ಪುರುಷ ಅಭ್ಯರ್ಥಿಗಳಿಗೆ ಜನಿವಾರ, ಉಡದಾರ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಕಿವಿಯೋಲೆ ಹೊರತುಪಡಿಸಿ ಮಾಂಗಲ್ಯ ಸರ, ಕೈಬಳೆ, ಮೂಗುತಿ, ಕಾಲುಂಗುರ, ಕಾಲುಗೆಜ್ಜೆ, ಕುಂಕುಮ ಮತ್ತು ಹಣೆಬೊಟ್ಟು ಧರಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ನಂಬಿಕೆಯ ಭಾಗವಾಗಿ ಕೈಗೆ ಕಟ್ಟುವ ದಾರ, ಶಿವದಾರ, ಶಿವಲಿಂಗ, ಉಂಗುರ, ತಾಯಿತ ಹಾಗೂ ರುದ್ರಾಕ್ಷಿ ಧರಿಸಲು ಅನುಮತಿ ನೀಡಲಾಗಿದೆ.

ಶೂಗಳ ಬದಲಿಗೆ ತೆಳುವಾದ ಚಪ್ಪಲಿ ಧರಿಸಬೇಕು. ಕ್ಯಾಪ್, ಕಿವಿ, ತಲೆ ಹಾಗೂ ಮುಖ ಮುಚ್ಚುವ ಉಡುಪುಗಳು, ಹೆಚ್ಚು ಜೇಬುಗಳಿರುವ ಜೀನ್ಸ್ ಪ್ಯಾಂಟ್, ಬ್ಯಾಗ್, ಪರ್ಸ್, ಮೊಬೈಲ್, ಬ್ಲೂಟೂತ್, ಇಯರ್ ಫೋನ್, ಸ್ಮಾರ್ಟ್ ವಾಚ್, ಕೈಗಡಿಯಾರ, ಕ್ಯಾಮೆರಾ, ಪೆನ್ ಡ್ರೈವ್, ಇಲೆಕ್ಟ್ರಾನಿಕ್ ಪೆನ್ ಹಾಗೂ ಸ್ಕ್ಯಾನರ್ ಸೇರಿದಂತೆ ಇಲೆಕ್ಟ್ರಾನಿಕ್ ಮತ್ತು ಇತರ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.

ಈ ನಡುವೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

Tags

KPSC ExamHigh-Tech SecurityDavanagere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X