Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ನನ್ನ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ...

ನನ್ನ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಿಲ್ಲ: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ5 April 2026 6:15 PM IST
share
ನನ್ನ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಿಲ್ಲ: ಸಚಿವ ಝಮೀರ್ ಅಹ್ಮದ್

ದಾವಣಗೆರೆ: ನಮ್ಮ ಮತ್ತು ಸಚಿವ ಮಲ್ಲಿಕಾರ್ಜುನ್ ನಡುವೆ ಯಾವುದೇ ಮನಸ್ತಾಪವಾಗಲೀ, ಮುನಿಸಾಗಲೀ ಇಲ್ಲ. ಇದೆಲ್ಲವೂ ಮಾಧ್ಯಮದ ಸೃಷ್ಟಿ ಮಾತ್ರ ಎಂದು ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದರು.

ನಗರದ ಸಚಿವ ಮಲ್ಲಿಕಾರ್ಜುನ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಲ್ಲಿಕಾರ್ಜುನ್ ಮತ್ತು ನಾವು ಆತ್ಮೀಯ ಸ್ನೇಹಿತರು. ನಾವು ಏಕವಚನದಲ್ಲಿ ಮಾತನಾಡಿಸಿಕೊಳ್ಳುತ್ತೇವೆ. ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಎ. 5 ರಂದು ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಪ್ರಚಾರಕ್ಕೆ ಬಂದ್ದಿದ್ದೇನೆ. ದಾವಣಗೆರೆ ದಕ್ಷಿಣ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು, ಯಾರು ಬಂದರೂ, ಬರದಿದ್ದರೂ ಕಾಂಗ್ರೆಸ್ ಗೆಲ್ಲಲಿದೆ. ಸಮುದಾಯ ಮತ್ತು ಪಕ್ಷದಲ್ಲಿ ಕೆಲವರು ಅಸಮಾಧಾನಗೊಂಡಿದ್ದು ಅವರನ್ನು ಮಾತನಾಡಿಸಿ ಸಮಾಧಾನ ಪಡಿಸಿ ಕೆಲಸ ಮಾಡುವಂತೆ ತಿಳಿಸುತ್ತೇನೆ ಎಂದು ಹೇಳಿದರು.

ಪಕ್ಷದ ಸಂಪ್ರದಾಯದಂತೆ ಅನುಕಂಪದ ಹಿನ್ನಲೆಯಲ್ಲಿ ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕುಟುಂಬದ ಸದಸ್ಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಖಾಸಗಿ ಸಮಾರಂಭಕ್ಕೆಂದು ನಗರಕ್ಕೆ ಬಂದಾಗ ಆಹಿಂದ ಸಮಾಜದವರು ಮುಖ್ಯವಾಗಿ ಮುಸ್ಲಿಂ ಸಮಾಜದ ಮುಖಂಡರು ನನ್ನನ್ನು ದಾವಣಗೆರೆ ದಕ್ಷಿಣದ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಿಸುವಂತೆ ಕೇಳಿದ್ದರು. ಈ ಹಿನ್ನಲೆಯಲ್ಲಿ ನಾವು ಹೈಕಮಾಂಡಗೆ ಟಿಕೆಟ್‍ಗಾಗಿ ಬೇಡಿಕೆ ಇಟ್ಟಿದ್ದವು. ಅದರೆ, ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ. 224 ಕ್ಷೇತ್ರಗಳು ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕ್ ಗಾಂಧಿ, ರಾಹುಲ್ ಗಾಂಧಿ ಅವರ ಕ್ಷೇತ್ರಗಳಾಗಿದ್ದು ಅವರು ಯಾರಿಗೆ ಬೇಕಾದರೂ ಟಿಕೆಟ್ ಕೊಡಬಹುದು ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ನಾಲ್ಕು ಅಭ್ಯರ್ಥಿಗಳು ಕಣದಲ್ಲಿದ್ದು 3 ಸಾವಿರ ಮತ ಪಡೆದಿದ್ದರು. ಈ ಬಾರಿ 11 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದು ಅವರನ್ನು ಮನವೊಲಿಸುವ ಕೆಲಸ ಮಾಡುತ್ತೇವೆ. ವಿಧಾನಪರಿಷತ್ ಸದಸ್ಯ ಜಬ್ಬಾರ್ ಸಾಬ್ ಸೇರಿದಂತೆ ಅಸಮಾಧಾನಿತ ಎಲ್ಲಾ ಕಾಂಗ್ರೆಸ್ ಸದಸ್ಯರು ಒಂದೇ ಕುಟುಂಬವಿದ್ದಂತೆ. ಕುಟುಂಬದಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ಅಸಮಾಧಾನಿತರೊಂದಿಗೆ ಮಾತನಾಡಿ ಪ್ರಚಾರಕ್ಕೆ ಕರೆಯುತ್ತೇನೆ ಎಂದು ತಿಳಿಸಿದರು.

ಸಚಿವ ಮಲ್ಲಿಕಾರ್ಜುನ್ ಮಾತನಾಡಿ, ಝಮೀರ್ ಮತ್ತು ನಾವು ಆತ್ಮೀಯ ಸ್ನೇಹಿತರು. ನಾವು ಆತ್ಮೀಯವಾಗಿ ಬಾರೋ ..ಹೋಗೋ ಎಂದು ಏಕವಚನದಲ್ಲಿಯೇ ಮಾತನಾಡಿಕೊಳ್ಳುತ್ತೇವೆ. ಮಾತನಾಡುವ ಬರದಲ್ಲಿ ನಾನು ಅಂದು ಆ ರೀತಿ ಮಾತನಾಡಿರುವುದು. ಅದನ್ನು ಬೆಳಸಿಕೊಂಡು ಹೋಗುವ ಅಗತ್ಯವಿಲ್ಲ. ನಮ್ಮ ಮಧ್ಯೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಹೇಳಿದರು.

ರಾಜ್ಯ ಚುನಾವಣಾ ಉಸ್ತುವಾರಿ ಅಭಿಷೇಕ ದತ್ತ, ಸಚಿವ ಎಂ.ಸಿ. ಸುಧಾಕರ, ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಇತರರು ಇದ್ದರು.


ಅಸಮಾಧಾನಕ್ಕೆ ತೆರೆ

ಸಚಿವರಾದ ಮಲ್ಲಿಕಾರ್ಜುನ್ ಮತ್ತು ಝಮೀರ್ ಅಹಮದ್ ನಡುವೆ ಉಂಟಾಗಿದ್ದ ಅಸಮಾಧಾನಕ್ಕೆ ಕೊನೆಗೂ ರವಿವಾರ ಝಮೀರ್ ಆಹಮದ್ ಅವರೇ ನಗರಕ್ಕೆ ಆಗಮಿಸುವ ಮೂಲಕ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ಮೂಲಕ ಆಗಮಿಸಿದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಝಮೀರ್ ಪರ ಘೋಷಣೆಗಳನ್ನು ಕೂಗಿ ಪುಷ್ಪ ಎರಚುವ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಅಭಿಮಾನದಿಂದ ಬರಮಾಡಿಕೊಂಡರು.

Tags

Davanagere Southzameer ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X