Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದೇಶದಲ್ಲಿರುವ ಸರಕಾರ ಸಾಮಾನ್ಯ...

ದೇಶದಲ್ಲಿರುವ ಸರಕಾರ ಸಾಮಾನ್ಯ ಪ್ರಜೆಗಳಿಗಾಗಿ ಕೆಲಸ ಮಾಡದೆ, ಬಂಡವಾಳ ಶಾಹಿಗಳ ಪರ ಕೆಲಸ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ4 May 2024 10:25 PM IST
share
ದೇಶದಲ್ಲಿರುವ ಸರಕಾರ ಸಾಮಾನ್ಯ ಪ್ರಜೆಗಳಿಗಾಗಿ ಕೆಲಸ ಮಾಡದೆ, ಬಂಡವಾಳ ಶಾಹಿಗಳ ಪರ ಕೆಲಸ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ

ದಾವಣಗೆರೆ : ದೇಶದಲ್ಲಿರುವ ಸರಕಾರ ಸಾಮಾನ್ಯ ಪ್ರಜೆಗಳಿಗಾಗಿ ಕೆಲಸ ಮಾಡುತ್ತಿಲ್ಲ. ಬಂಡವಾಳ ಶಾಹಿಗಳ ಪರ ಕೆಲಸ ಮಾಡುತ್ತಿದೆ. ಇದರ ಪರಿಣಾಮ 45 ವರ್ಷಗಳಲ್ಲಿ ಕಾಣದ ನಿರುದ್ಯೋಗ ಭಾರತದಲ್ಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಭವಿಷ್ಯ ಅಡಗಿದೆ. ದೇಶ ಯಾವ ದಿಕ್ಕಿನಲ್ಲಿ ಸಾಗಬೇಕು ಎನ್ನುವ ಕುರಿತು ಜನ ತೀರ್ಮಾನ ಮಾಡಬೇಕು. ರೈತರು ಸಾಕಷ್ಟು ಸಮಸ್ಯೆಗಳ ನಡುವೆಯೂ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಭವಿಷ್ಯ ರೂಪಿಸಲು ಮುಂದಾಗಿದ್ದಾರೆ. ಆದರೆ ದೇಶದ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಎಂದರೆ ಉತ್ತಮ ವಿದ್ಯಾಭ್ಯಾಸ ಇದ್ದರೂ ಉತ್ತಮ ಉದ್ಯೋಗವಿಲ್ಲ. ಕೇಂದ್ರ ಸರಕಾರ ಉದ್ಯೋಗ ಸೃಷ್ಟಿಸಲು ಯಾವ ಯೋಜನೆಯನ್ನೂ ರೂಪಿಸಿಲ್ಲ. ಎಲ್ಲೆಲ್ಲಿ ಅವಕಾಶ ಇತ್ತೋ ಅದೆಲ್ಲವನ್ನೂ ಕೇಂದ್ರ ಮುಚ್ಚಿ ಹಾಕಿದೆ ಎಂದು ಆಕ್ರೋಶ ಹೊರ ಹಾಕಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಪ್ರತಿಯೊಂದು ವಸ್ತುವಿನ ಮೇಲೆ ಜಿಎಸ್‌ಟಿ ಹೊರೆ ಹಾಕಿದೆ. ರೈತರ ಬೆಳೆಗೆ ಬೆಲೆ ಇಲ್ಲ. ರೈತರಿಗೆ ಆದಾಯ ಇಲ್ಲದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೋದಿಜಿ ದೊಡ್ಡ ವೇದಿಕೆಗಳಿಗೆ ಹೋಗುತ್ತಾರೆ. ಆದರೆ ಒಬ್ಬ ಬಡವನ ಮನೆಗೆ ಹೋಗಿಲ್ಲ. ಆದರೆ ಬಡವರ ಪರ ಎನ್ನುತ್ತಾ ದೊಡ್ಡ ಘೋಷಣೆ ಮಾಡುತ್ತಾರೆ, ಆದರೆ ಯಾವ ಕೆಲಸವನ್ನೂ ಮಾಡಿಲ್ಲ. ವಿಮಾನ ನಿಲ್ದಾಣ, ಹೆದ್ದಾರಿ, ಬ್ರಿಡ್ಜ್, ವಿದ್ಯುತ್ ಸ್ಥಾವರ ಘಟಕಗಳು ಪ್ರಧಾನಿಯ ಶ್ರೀಮಂತ ಗೆಳೆಯರ ಪಾಲಾಗಿವೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ದೇಶದ ದೊಡ್ಡ ಸಂಸ್ಥೆಯನ್ನು ಖಾಸಗೀಕರಣ ಮಾಡಿದರೆ, ಮೀಸಲಾತಿಗೆ ಪೆಟ್ಟು ಬೀಳಲಿದೆ. ದೇಶದ ಸಂಪತ್ತು ಜನರಿಗೆ ಸೇರಿದ್ದು. ಆದರೆ, ಪ್ರಧಾನಿಯವರು ಈ ಸಂಪತ್ತನ್ನು ಸಾರ್ವಜನಿಕರಿಗೆ ನೀಡುವ ಯಾವ ಕೆಲಸವನ್ನೂ ಮಾಡಿಲ್ಲ. 10 ವರ್ಷಗಳ ಆಡಳಿತದಲ್ಲಿ ಜನ ಜೀವನ ಸುಧಾರಿಸಿದೆಯೇ?. ಉದ್ಯೋಗ ಸಿಕ್ಕಿದೆಯೇ ಎಂದು ಪ್ರಶ್ನಿಸಿದರು.

ದೇಶದಲ್ಲಿ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಬಿಜೆಪಿ ಪಕ್ಷ ವಿಶ್ವದಲ್ಲೇ ಅತ್ಯಂತ ಶ್ರೀಮಂತ ಪಕ್ಷವಾಗಿ ಹೊರಹೊಮ್ಮಿದೆ. ಇದರ ಜೊತೆಗೆ ದೊಡ್ಡ ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದಾರೆ. ಒಂದೆಡೆ ಬಿಜೆಪಿ ಹಣ ಸಂಗ್ರಹಿಸುತ್ತಿದೆ, ಇನ್ನೊಂದೆಡೆ ಸಾಮಾನ್ಯ ಜನರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡದೆ ಶ್ರೀಮಂತರ ಸಾಲ ಮನ್ನಾ ಮಾಡಿದೆ. ಈ ಮೂಲಕ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಈ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ಯಾವ ಪಕ್ಷ ಅಧಿಕಾರಕ್ಕೆ ಬಂದರೆ ಒಳಿತು ಎಂದು ಜನ ಮತದಾನಕ್ಕೂ ಮುನ್ನ ಯೋಚಿಸಬೇಕು. ಸಮಾಜದಲ್ಲಿ ಯಾರು ಬದಲಾವಣೆ ತರುತ್ತಾರೆ ಅಂತಹವರಿಗೆ ಮತ ನೀಡಿ. ಸಾಧನೆ ಮುಂದಿಟ್ಟು ಮತ ಕೇಳಬೇಕು. ಮೋದಿ ವಿದೇಶದಲ್ಲಿರುವ ಕಪ್ಪುಹಣ ತಂದು, ಅಧಿಕಾರಕ್ಕೆ ಬಂದ ಮೂರೇ ದಿನಗಳಲ್ಲಿ ಜನರ ಖಾತೆಗೆ ಹದಿನೈದು ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಹತ್ತು ವರ್ಷಗಳಲ್ಲಿ ಹದಿನೈದು ರೂಪಾಯಿಯನ್ನೂ ಹಾಕಿಲ್ಲ. ಎರಡು ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ದರು. ಆದರೆ ಹತ್ತು ವರ್ಷಗಳಲ್ಲಿ ಉದ್ಯೋಗ ಸೃಷ್ಠಿಯಾಗಿಲ್ಲ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ ಶಾಂತನಗೌಡ, ಲತಾ ಮಲ್ಲಿಕಾರ್ಜುನ್, ಬಸವಂತಪ್ಪ, ಶಿವಗಂಗಾ ಬಸವರಾಜ್, ಶರತ್ ಬಚ್ಚೇಗೌಡ, ಮುಹಮ್ಮದ್ ನಲಪಾಡ್, ಮೇಯರ್ ವಿನಾಯಕ ಪೈಲ್ವಾನ್, ಸಾಧು ಕೋಕಿಲ, ಮಾಜಿ ಸಚಿವ ಎಚ್. ಆಂಜನೇಯ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X