ಮುಖ್ಯಮಂತ್ರಿ ಸ್ಥಾನ | ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧ : ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ
ದಾವಣಗೆರೆ : ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಚನ್ನಗಿರಿ ತಾಲೂಕಿನ ಗೋಪೇನಹಳ್ಳಿಯಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಸಂಬಂಧ ಪಟ್ಟಂತಹ ಚರ್ಚೆ, ಗೊಂದಲಗಳು ನಡೆಯುತ್ತಿರುವುದು ಹೈಕಮಾಂಡ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂದಿಸಿದಂತೆ ಎಲ್ಲವೂ ಇತ್ಯರ್ಥಗೊಳ್ಳಲಿದೆ ಎಂದರು.
ಪ್ರಸ್ತುತ ನಡೆಯುತ್ತಿರುವ ಗೊಂದಲ ಬಗೆಹರಿಯಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ಶಾಸಕರ ಅಭಿಪ್ರಾಯವಾಗಿದೆ. ಶೀಘ್ರವೇ ಬಗೆಹರಿಯಲಿದೆ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಅವರು ದೆಹಲಿ ಭೇಟಿಗೆ ವಿಶೇಷ ಅರ್ಥ ಬೇಡ ಎಂದರು.
2028ರ ಚುನಾವಣೆ ಬಳಿಕ ಸಿಎಂ ಹುದ್ದೆಗೆ ಬೇಡಿಕೆ ನಮ್ಮದಾಗಿದೆ. ಅಭಿಮಾನಿಗಳು ರಾಜ್ಯದ ಎಲ್ಲಡೆ ಒತ್ತಾಯಿಸುತ್ತಿದ್ದಾರೆ. ಈಗ ಆ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು.





