Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. "ಇದು ಪಾಕಿಸ್ತಾನ ಅಲ್ಲ": ಹರಿಹರ ತಾ.ಪಂ...

"ಇದು ಪಾಕಿಸ್ತಾನ ಅಲ್ಲ": ಹರಿಹರ ತಾ.ಪಂ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ22 Jan 2025 5:21 PM IST
share
ಇದು ಪಾಕಿಸ್ತಾನ ಅಲ್ಲ: ಹರಿಹರ ತಾ.ಪಂ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬೆದರಿಕೆ

ಹರಿಹರ : ತಾಲ್ಲೂಕಿನ ವಿವಿಧ ಇಲಾಖಾಧಿಕಾರಿಗಳು ನಾನಾ ಯೋಜನೆ, ಕಟ್ಟಡಗಳ ಉದ್ಘಾಟನಾ ಸಮಾರಂಭ ಆಯೋಜಿಸಲು ಸಂಸದರ ಸಮಯಾವಕಾಶಕ್ಕಾಗಿ ಕಾಯುವುದು ಸರಿಯಲ್ಲ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್ ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಕಾರ್ಯಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾಯಬೇಕೇ ಹೊರತು ಸಂಸದರಿಗಲ್ಲ, ಸಂಸದರು ಕಾರ್ಯಕ್ರಮಗಳಲ್ಲಿ ಉಪಸ್ಥಿತರಿರುತ್ತಾರಷ್ಟೇ.

ಜಿಲ್ಲಾ ಉಸ್ತುವಾರಿ ಸಚಿವರಿಗಾದರೆ ಒಂದೆರಡು ದಿನ ಕಾಯಬಹುದು, ಇದರ ಜೊತೆಗೆ ಶಾಸಕರಿಗೂ ಗೌರವ ಕೊಡಬೇಕು, ಸಂಸದರು ಸಮಯಾವಕಾಶ ಕೊಟ್ಟಿಲ್ಲ, ಸಂಸದರು ಅವತ್ತು ಬರುತ್ತಾರೆ, ಇವತ್ತು ಬರುತ್ತಾರೆ ಎಂಬ ಸಬೂಬನ್ನು ಇನ್ನು ಮುಂದೆ ನಾನು ಕೇಳಲ್ಲ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭಾ ಸೂಚನಾ ಪತ್ರದಲ್ಲಿ ಶಾಸಕರು ಹಾಗೂ ಆಡಳಿತಾಧಿಕಾರಿಯವರ ಹೆಸರಿನ ಜೊತೆಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್‍ರವರ ಹೆಸರು ಇದ್ದ ವಿಷಯ ಪ್ರಸ್ತಾಪಿಸಿದ ಶಾಸಕರು, ಈ ಸೂಚನಾ ಪತ್ರ ಸಿದ್ಧಪಡಿಸುವ ಜವಾಬ್ದಾರಿ ಯಾರದ್ದು ಎಂದು ಪ್ರಶ್ನಿಸಿದರು.

ಆಗ ಸಭೆಯಲ್ಲಿದ್ದ ಸಿಬ್ಬಂದಿ ಸಲೀಂ ಎಂಬವರು ಎದ್ದು ಕೇಸ್ ವರ್ಕರ್ ಮುಹಮ್ಮದ್ ಅಲಿ ಎಂದರು. ಆಗ ಮುಹಮ್ಮದ್ ಅಲಿ ಎಂಬವರನ್ನು ಸಭೆಗೆ ಕರೆಯಿಸಿದರು, ತಪ್ಪು ಮಾಡಿರುವ ಮುಹಮ್ಮದ್‌ ಅವರನ್ನು ಸಸ್ಪೆಂಡ್ ಮಾಡಲು ಕ್ರಮಕೈಗೊಳ್ಳಿ ಎಂದು ಇಒ ಸುಮಲತಾ ಎಸ್.ಪಿ. ಇವರಿಗೆ ತಾಕೀತು ಮಾಡಿದರು.

ನಂತರ ತಮ್ಮ ವಾಗ್ದಾಳಿ ಮುಂದುವರೆಸಿದ ಶಾಸಕರು, "ಮುಹಮ್ಮದ್ ಮತ್ತು ಸಲೀಂ, ಇದು ಪಾಕಿಸ್ತಾನವಲ್ಲ. ನಿಮ್ಮ ಕರ್ತವ್ಯದ ಅವಧಿ ಮುಗಿದ ನಂತರ ಅವರ ಮನೆಗೆ (ಸಂಸದರು) ಹೋಗಿ ಕಸ ಹೊಡೆಯಿರಿ, ಅದು ನನಗೆ ಸಂಬಂಧಿಸಿದ್ದಲ್ಲ, ಆದರೆ ಕಚೇರಿಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸಿರಿ" ಎಂದರು.

ನಂತರ ಪಂಚಾಯತ್‍ರಾಜ್ ಇಂಜಿನಿಯರಿಂಗ್ ಇಲಾಖೆ ಎಇಇ ಗಿರೀಶ್‍ರನ್ನು ಉದ್ದೇಶಿಸಿ, ತಾಪಂ ಇಒ ನಿಗದಿ ಮಾಡಿದ ಏಜೆನ್ಸಿಯವರಿಗೆ ನೀವು ಕಾಮಗಾರಿ ಕೊಡುವುದು ಬಿಟ್ಟು, ಇವರು ಕಾಂಗ್ರೆಸ್ಸಿನವರು, ಇವರು ಬಿಜೆಪಿಯವರು ಎಂದು ಕಾಮಗಾರಿ ನೀಡುವಲ್ಲಿ ತಾರತಮ್ಯ ಮಾಡುತ್ತೀರಾ, ಇದೆಲ್ಲವನ್ನು ನಾನು ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.

ಈ ಕ್ಷೇತ್ರದ ಶಾಸಕನಾಗಿ ನನಗೆ ನೀಡಬೇಕಾದ ಗೌರವ ನೀಡಬೇಕು, ಯಾರದ್ದೂ ಮಾತು ಕೇಳಬೇಡಿ. ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ನಾನು ಮಾಜಿ ಶಾಸಕನಾಗಿಯೂ ಕ್ಷೇತ್ರಕ್ಕೆ ವಿಶೇಷ ಅನುದಾನ ತರಿಸಿದ್ದೇನೆ. ಪಾಪರ್ ಆಗಿರುವ ಈ ಸರ್ಕಾರದಲ್ಲಿ ತಾಕತ್ತಿದ್ದರೆ ಅವರೂ ವಿಶೇಷ ಅನುದಾನ ತರಿಸಲಿ ಎಂದು ತಾಲೂಕಿನ ಕಾಂಗ್ರೆಸ್ ಮುಖಂಡರ ಹೆಸರು ಪ್ರಸ್ತಾಪಿಸದೆ ಹೇಳಿದರು.

ಈಚೆಗೆ ನಗರಸಭೆ ಆವರಣದಲ್ಲಿ ಧೂಡಾ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದಲ್ಲೂ ಸೂಚನಾ ಪತ್ರದಲ್ಲಿ ತಮ್ಮ ಹೆಸರು ಪ್ರಕಟಿಸುವಲ್ಲಿ ಅಗೌರವ ಸೂಚಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಠಿಯವರನ್ನು ಶಾಸಕರು ತೀವ್ರ ತರಾಟೆ ತೆಗೆದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X