Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಈಜಲು...

ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು

ವಾರ್ತಾಭಾರತಿವಾರ್ತಾಭಾರತಿ2 Feb 2025 3:47 PM IST
share
ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು

ದಾವಣಗೆರೆ: ನಾಲೆಯಲ್ಲಿ ಈಜಲು ಹೋದ ಬಾಲಕರು ಇಬ್ವರು ನೀರು ಪಾಲಾಗಿರುವ ಘಟನೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕುರ್ಕಿ ಗ್ರಾಮದ ಪಾಂಡು (16) , ತುರ್ಚಘಟ್ಟ ಗ್ರಾಮದ ಯತೀಂದ್ರ (16) ನೀರು ಪಾಲಾದ ಬಾಲಕರು. ದಾವಣಗೆರೆಯ ಗುರುಕುಲ ವಸತಿ ಶಾಲೆಯಲ್ಲಿ ಈ ಬಾಲಕರು ಎಸ್ಸೆಸ್ಸೆಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ರವಿವಾರ ಶಾಲೆಗೆ ರಜೆ ಇದ್ದಿದ್ದರಿಂದ ಕುರ್ಕಿ ಗ್ರಾಮದಲ್ಲಿರುವ ಸಲೂನ್‌ ಗೆ ಬಂದಿದ್ದಾರೆ.

ಗ್ರಾಮದ ಬಳಿ ಹರಿಯುತ್ತಿರುವ ದೊಡ್ಡದಾದ ಭದ್ರಾ ಕಾಲುವೆಯಲ್ಲಿ ಪಾಂಡು ಮತ್ತು ಯತೀಂದ್ರ ಈಜಲು ಬಂದಿದ್ದಾರೆ. ಪಾಂಡುಗೆ ಈಜಲು ಬರುತ್ತಿತ್ತು. ಯತೀಂದ್ರಗೆ ಈಜಲು ಬರುತ್ತಿರಲಿಲ್ಲ. ಮೊದಲು ಪಾಂಡು ಕಾಲುವೆಗೆ ಜಿಗಿದು ಈಜಾಡುತ್ತಿದ್ದ. ನಂತರ ಯತೀಂದ್ರ ಜಿಗಿದಿದ್ದಾನೆ. ಈ ವೇಳೆ ಯತೀಂದ್ರ ಮುಳುಗಿ ಏಳುತ್ತಿದ್ದಾಗ ಪಾಂಡು ಅವನನ್ನು ರಕ್ಷಣೆ ಮಾಡಲು ಬಂದಿದ್ದು, ಈ ಸಂದರ್ಭದಲ್ಲಿ ಇಬ್ಬರೂ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಅವರು ಈಜುತ್ತಿದ್ದ ಸಮೀಪವೇ ಗೇಟು ಇದ್ದು, ಈ ಗೇಟ್ ಬಳಿ ಪಾಂಡು ಮೃತದೇಹ ಪತ್ತೆಯಾಗಿದೆ. ಯತೀಂದ್ರನ ಮೃತದೇಹ ಸಿಕ್ಕಿಲ್ಲ.

ಘಟನೆ ಸ್ಥಳಕ್ಕೆ ಶಾಸಕ ಬಸವಂತಪ್ಪ ಭೇಟಿ:

ಸುದ್ದಿ ತಿಳಿದ ಕೂಡಲೇ ಘಟನೆ ಸ್ಥಳಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ನೀರು ಪಾಲಾದ ಬಾಲಕರ ಮೃತದೇಹ ಹೊರ ತೆಗೆಯಲು ಸಹಕರಿಸಿದ್ದಾರೆ. ನುರಿತ ಈಜುಗಾರರನ್ನು ಕರೆಸಿದ್ದು, ಪಾಂಡು ಮೃತದೇಹ ಸಿಕ್ಕಿದೆ. ಯತೀಂದ್ರನ ಮೃತದೇಹ ಪತ್ತೆಯಾಗಿಲ್ಲ. ಹದಡಿ ಪೊಲೀಸರು ಮೃತದೇಹ ಹುಡುಕಾಟ ನಡೆಸಿದ್ದಾರೆ.

ಕಾಲುವೆ ಬಳಿ ಜನಸಾಗರ:

ಇಬ್ಬರು ಬಾಲಕರು ನೀರು ಪಾಲಾದ ಸುದ್ದಿ ಹಬ್ಬುತ್ತಿದ್ದಂತೆ ಕುರ್ಕಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ಬೈಕ್, ಕಾರು, ಟ್ರ್ಯಾಕ್ಟರ್ ಗಳಲ್ಲಿ ದೌಡಾಯಿಸಿದ್ದು, ಕಾಲುವೆ ಬಳಿ ಜನಸಾಗರ ಸೇರಿದೆ.

ಮುಗಿಲು ಮುಟ್ಟಿದ ಪೋಷಕರ ಅಕ್ರಂದನ:

ನೀರು ಪಾಲಾದ ಪೋಷಕರ ಅಕ್ರಂದನ ಮುಗಿಲು ಮುಟ್ಟಿದ್ದು, ತಂದೆ-ತಾಯಿಗಳ ರೋದನಕ್ಕೆ ಸೇರಿದ್ದ ಜನರು ಕೂಡ ಕಂಬನಿ ಮಿಡಿದರು.

Tags

bhadra lakeDavangere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X