ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ : ಸಚಿವ ಬಸವಂತಪ್ಪ

ದಾವಣಗೆರೆ : ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ-2026ರ ಹಿನ್ನೆಲೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆನಗೋಡು ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ಸಚಿವ ಕೆ.ಎಸ್. ಬಸವಂತಪ್ಪಅವರು ಪದವೀಧರ ಮತದಾರರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ಶನಿವಾರ ಪ್ರಚಾರ ಸಭೆ ನಡೆಸಿದರು.
ಈ ವೇಳೆ ಸಭೆಯಲ್ಲಿ ಮಾತನಾಡಿದ ಸಚಿವರು, ಪದವೀಧರರ ಆಶಯಗಳು ಹಾಗೂ ಸಮಸ್ಯೆಗಳಿಗೆ ವಿಧಾನಪರಿಷತ್ತಿನಲ್ಲಿ ಸಮರ್ಥವಾಗಿ ಧ್ವನಿಯಾಗಲು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸುವಂತೆ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಮುಖ ಹಕ್ಕಾಗಿದ್ದು, ಪ್ರತಿಯೊಬ್ಬ ಪದವೀಧರ ಮತದಾರರು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕೆಂದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾಯಕರ್ತರು ಉಪಸ್ಥಿತರಿದ್ದರು.
Next Story




