ಡಾ. ಒ.ಜಿ. ಪಾಲನ್ನ
ಮಂಗಳೂರು, ಆ.7: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಆಲಿವರ್ ಗ್ಲಾಡ್ಸನ್ ಪಾಲನ್ನ (84) ಗುರುವಾರ ಬೆಂಗಳೂರಿನಲ್ಲಿ ವಯೋಸಹಜ ಕಾರಣಗಳಿಂದ ನಿಧನರಾದರು.
ಪತ್ನಿ ಮತ್ತು ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಂತ ಫಿಲೋಮಿನಾ ಕಾಲೇಜಿನಲ್ಲಿ 33 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ನಂತರ ಡಾ. ಪಾಲನ್ನ ಬೆಂಗಳೂರಿನಲ್ಲಿ ಶೈಕ್ಷಣಿಕ ವೃತ್ತಿಜೀವನವನ್ನು ಮುಂದುವರೆಸಿದರು. ಎಎಂಸಿ ಇಂಜಿನಿಯರಿಂಗ್ ಕಾಲೇಜು, ಈಸ್ಟ್ ವೆಸ್ಟ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಆರ್‌ಎನ್‌ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ 10 ವರ್ಷಗಳ ಕಾಲ ಕಾರ್ಯನಿರ್ವಹಿಸಿದರು. ರಸಾಯನಶಾಸ್ತ್ರದಲ್ಲಿ ಹಲವಾರು ಪಠ್ಯಪುಸ್ತಕಗಳನ್ನೂ ರಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆಯು ಆ.9ರಂದು ಅಪರಾಹ್ನ 3:30ಕ್ಕೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಭಾರತೀಯ ಕ್ರಿಶ್ಚಿಯನ್ ಸ್ಮಶಾನದಲ್ಲಿ (ಗೇಟ್ 1) ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.







