ಎಂ.ಕೆ. ಸನಿಲ್

ಉಡುಪಿ, ಅ.15: ಜೀವಮಾ ನಿಗಮದಲ್ಲಿ ಸುಮಾರು ಮೂರು ದಶಕಗಳ ಕಾಲ ಉದ್ಯೋಗಿಯಾಗಿದ್ದ, ಹಿರಿಯ ಸಾಮಾಜಿಕ ಕಾರ್ಯಕರ್ತ ಅಂಬಲಪಾಡಿ ಕಪ್ಪೆಟ್ಟು ನಿವಾಸಿ ಎಂ.ಕೆ.ಸನಿಲ್ (88) ಇಂದು ನಿಧನರಾದರು.
ಬನ್ನಂಜೆ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷರಾಗಿರುವ ಇವರು, ಲಿಕೋ ಬ್ಯಾಂಕಿನ ಅಧ್ಯಕ್ಷರಾಗಿ, ಅಂಬಲಪಾಡಿ ಶಿಕ್ಷಣ ಸಂಸ್ಥೆಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಸನಿಲ್, ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕಲಾಪ್ರೇಮಿಯಾಗಿದ್ದ ಇವರು ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು. ಎಂ.ಕೆ.ಸನಿಲ್‌ರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
Next Story





