ರಾಮಕೃಷ್ಣ ನೆಲ್ಲಿ

ಮಣಿಪಾಲ, ಅ.24: ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ರಾಮಕೃಷ್ಣ ನೆಲ್ಲಿ ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು.
ಬ್ಯಾಂಕಿನಲ್ಲಿ ದೇಶದ ವಿವಿಧೆಡೆ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು, ಪ್ರಸ್ತುತ ಶಿವಳ್ಳಿ ಕೋ- ಆಪರೇಟಿವ್ ಬ್ಯಾಂಕಿನ ನಿರ್ದೇಶಕರು ಮತ್ತು ಪ್ರಸನ್ನ ಗಣಪತಿ ದೇವಸ್ಥಾನ ಹುಡ್ಕೋ ಕಾಲೋನಿ ಮಣಿಪಾಲ ಇದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಹವ್ಯಾಸಿ ಫೋಟೋಗ್ರಾಫರ್ ಆಗಿದ್ದ ಇವರು, ಪತ್ನಿ, ಇಬ್ಬರು ಪುತ್ರರು, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ದೇವಸ್ಥಾನದ ಆಡಳಿತ ಅಧ್ಯಕ್ಷ ಹರಿಪ್ರಸಾದ ರೈ ಬೆಳ್ಳಿಪಾಡಿ ಮತ್ತು ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.
Next Story





