ಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ನಿಧನ

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷೆ ಹಾಗೂ ಕಲಾವಿದೆ ಪ್ರೊ. ಎಂ.ಜೆ. ಕಮಲಾಕ್ಷಿ ಮಂಗಳವಾರ ಮಧ್ಯಾಹ್ನ 1.30 ಗಂಟೆಗೆ ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿದ ಅವರು, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ.(ಇತಿಹಾಸ) ಮತ್ತು ಬರೋಡಾ ವಿಶ್ವವಿದ್ಯಾಲಯದಲ್ಲಿ ಮ್ಯೂರಲ್ ಕಲೆಯಲ್ಲಿ ವಿಶೇಷ ಅಧ್ಯಯನ ನಡೆಸಿದ್ದರು.
ಚಿತ್ರಕಲಾ ಕ್ಷೇತ್ರದಲ್ಲಿ ದಶಕಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದ ಪ್ರೊ. ಕಮಲಾಕ್ಷಿ ಅವರು, ತಮ್ಮ ವಿಶಿಷ್ಟ ಶೈಲಿಯ ಚಿತ್ರಕಲೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದರು. ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಅವರು ಕೈಗೊಂಡ ಕಲಾ ಉತ್ತೇಜನಾ ಕಾರ್ಯಕ್ರಮಗಳು ಇಂದಿಗೂ ಸ್ಮರಣೀಯವಾಗಿವೆ.
ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(2015), ಲಲಿತಕಲಾ ಅಕಾಡೆಮಿ ಪ್ರಶಸ್ತಿ ಮತ್ತು ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗಳನ್ನು ಪಡೆದಿದ್ದಾರೆ.
Next Story





