ಅಬ್ದುಲ್ ರಝಾಕ್ ಬಜ್ಪೆ

ಮಂಗಳೂರು, ಜು.17: ಬಜಪೆ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್‌ನ ಹಿರಿಯ ಸದಸ್ಯ ಅಬ್ದುಲ್ ರಝಾಕ್ ಬಜ್ಪೆ (56) ಶುಕ್ರವಾರ ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.
ಬಜ್ಪೆ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಬಿ.ಸಿ. ರೋಡ್ ನಿವಾಸಿಯಾಗಿದ್ದ ಅವರು, ಮಿತ್ತಬೈಲ್ ಜಬ್ಬಾರ್ ಉಸ್ತಾದ್‌ರ ಮಾಜಿ ಕಾರು ಚಾಲಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸಕ್ತ ಬಜಪೆ ಪರಿಸರದಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದರು.
*ಬಜ್ಪೆ ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಅಧ್ಯಕ್ಷ ಹಾಜಿ ಮೋನಾಕ, ಬಜ್ಪೆ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್, ಅಲ್ ಹುದಾ ಕಿನ್ನಿ ಪದವು ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಇಬ್ರಾಹಿಂ, ಸೋಶಿಯಲ್ ವೆಲ್ಫೇರ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಹರೇಕಳ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story




