ಪ್ರದೀಪ್ ಸಂಗಮ್

ಕುಂದಾಪುರ, ನ.11: ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಸಂಗಮ್(41) ಎಂಬವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಬುಧವಾರ ನಿಧನರಾದರು.
ಮೂರು ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತ ವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರು, ಹಂತಹಂತವಾಗಿ ಆರೋಗ್ಯದಲ್ಲಿ ಏರುಪೇರಾಗಿ ವರ್ಷದ ಹಿಂದೆ ಸಂಪೂರ್ಣ ಹಾಸಿಗೆ ಹಿಡಿದಿದ್ದರು.
ವಿಹಿಂಪ ಬಜರಂಗದಳದ ಕಾರ್ಯಕರ್ತನಾಗಿ ಕುಂದಾಪುರ ನಗರ, ತಾಲೂಕು ಸಂಚಾಲಕರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ಇವರು, ಬಿಜೆಪಿಯ ಯುವಮೋರ್ಚಾ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿದ್ದರು.
Next Story




