ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್ ನಿಧನ

ಮಂಗಳೂರು, ನ.24: ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಪ್ರದೀಪ್ ಕುಮಾರ್ ಕರ್ತವ್ಯ ನಿರತರಾಗಿದ್ದ ವೇಳೆ ಹೃದಯಾಘಾತದಿಂದ ಸೋಮವಾರ ನಿಧನರಾದರು.
ಪ್ರಸಕ್ತ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಸುತ್ತಿದ್ದ ಇವರು ಪುದು ಪ್ರಾಥಮಿಕ ಆರೋಗ್ಯ ಕೇಂದ್ರ, ಬಂಟ್ವಾಳ ಗಿರಿಜನ ಸಂಚಾರಿ ಘಟಕ,ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿ ಹಾಗೂ ಶಸ್ತ್ರಚಿಕಿತ್ಸಕರಾಗಿ ಹಾಗೂ ಪುತ್ತೂರು, ಅರಸೀಕೆರೆ ತಾಲೂಕು ಆಸ್ಪತ್ರೆ ಮತ್ತು ಸರಕಾರಿ ವೈದ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Next Story




