ಉದಯ ಕುಮಾರ್ ಭಟ್
ಬಂಟ್ವಾಳ : ಮಂಚಿ ಗ್ರಾಮದ ನೂಜಿ ನಿವಾಸಿ ಉದಯ ಕುಮಾರ ಭಟ್ (56) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.
ಮಹಾದೇವ ವಿವಿಧೋದ್ದೇಶ ಸಹಕಾರಿ ಸಂಘ ಮೇಲ್ಕಾರು ಶಾಖೆಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ನೂಜಿ ಮಂಚಿ, ಗೋವರ್ಧನ ಗಿರಿಯ ಶ್ರೀಕೃಷ್ಣ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಾಗೂ ಧಾರ್ಮಿಕ ಹಾಗೂ ವಿವಿಧ ಸಾಮಾಜಿಕ ಚಟುವಟಕೆಗಳಲ್ಲಿ ತೊಡಗಿಸಿಕೊಂಡಿದ್ದರು.
ಮೃತರು ತಾಯಿ ಹಾಗೂ ಓರ್ವ ಸಹೋದರ, ಮೂವರು ಸಹೋದರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story