ಐತಪ್ಪ ಕುತ್ತಾರ್

ಉಳ್ಳಾಲ: ಸಿಪಿಎಂ ಕಾರ್ಯಕರ್ತ, ಮುನ್ನೂರು ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದ ಐತಪ್ಪ ಕುತ್ತಾರ್ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಗುರುವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಬಿಎಸ್ ಎನ್ ಎಲ್ ಸಂಸ್ಥೆಯಲ್ಲಿ ಉದ್ಯೋಗಿ ಆಗಿದ್ದ ಅವರು,1970ರ ದಶಕದಲ್ಲೇ ಹೋರಾಟ ರಂಗದಲ್ಲಿ ಗುರುತಿಸಿ ಕೊಂಡಿದ್ದರು. ಡಿವೈಎಫ್ಐ ಸಂಘಟನೆಯಲ್ಲಿ ಸಕ್ರಿಯ ರಾಗಿದ್ದ ಅವರು ಸಮಾಜಮುಖಿ ಚಟುವಟಿಕೆಯಲ್ಲಿ ತನ್ನದೇ ಪಾತ್ರವನ್ನು ವಹಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು. ಕಾರ್ಮಿಕ ವರ್ಗದ ಚಳುವಳಿ, ಜನಪರ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಎಲ್ಲರಿಗೂ ಸ್ಪೂರ್ತಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಂತಾಪ : ಐತಪ್ಪ ಅವರ ನಿಧನಕ್ಕೆ ಸಿಪಿಎಂ ಉಳ್ಳಾಲ ವಲಯ ಸಮಿತಿ ಸಂತಾಪ ಸೂಚಿಸಿದೆ.
Next Story





