ಜಯಾನಂದ ದೇವಾಡಿಗ

ಮಂಗಳೂರು, ಜು.1: ಎಐಸಿಸಿ ಮಾಜಿ ಸದಸ್ಯ, ಅವಿಭಜಿತ ದ.ಕ ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಪ್ರಧಾನ ಕಾರ್ಯದರ್ಶಿ, ದೇವಾಡಿಗ ಸಮಾಜದ ಮುಂದಾಳು ಮುಲ್ಕಿ ಜಯಾನಂದ ದೇವಾಡಿಗ (91) ಸೋಮವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ ಒರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಮೃತರು ಆಗಲಿರುವರು.
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನಿಕಟವರ್ತಿಯಾಗಿ, ದ.ಕ. ಕನ್ನಡ ಮತ್ತು ಉಡುಪಿ ಜಿಲ್ಲಾ ಹಿಂದುಳಿದ ಜಾತಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮುಲ್ಕಿ ಜಯಾನಂದ ದೇವಾಡಿಗ ಕಾಂಗ್ರೆಸ್ ಪಕ್ಷದ ಪ್ರಮುಖರಲ್ಲಿ ಓರ್ವರಾಗಿದ್ದರು.
*ಸಂತಾಪ: ಮಾಜಿ ಕೇಂದ್ರ ಸಚಿವರಾದ ಎಂ.ವೀರಪ್ಪಮೊಯ್ಲಿ, ಜನಾರ್ದನ ಪೂಜಾರಿ, ಮಾಜಿ ಸಚಿವರಾದ ರಮಾನಾಥ ರೈ. ಅಭಯಚಂದ್ರ ಜೈನ್, ಶಾಸಕ ಐವನ್ ಡಿಸೋಜ ಸಂತಾಪ ಸೂಚಿಸಿದ್ದಾರೆ.
*ದ.ಕ.ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಹರೀಶ್ ಕುಮಾರ್, ಪದ್ಮರಾಜ್ ಆರ್. ಪೂಜಾರಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಕೆ., ಮಾಜಿ ಕಾರ್ಪೊರೇಟರ್‌ಗಳಾದ ಅಶೋಕ್ ಕುಮಾರ್ ಡಿ.ಕೆ., ವಿಜಯ್ ಕುಮಾರ್, ಪದ್ಮನಾಭ ಅಮೀನ್ ಮತ್ತಿತರರು ಅಂತಿಮ ದರ್ಶನ ಪಡೆದರು.