ಉಡುಪಿ, ಆ.3: ಅಲೆವೂರು ಸಾರ್ವಜನಿಕ ಗಣೇಶೋತ್ಸವದ ಸ್ಥಾಪಕರಲ್ಲಿ ಒಬ್ಬರಾದ ಸಮಾಜ ಸೇವಕಿ ಸುಚೇತ ಮಂಜುನಾಥ(68) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.
ಇವರು ಅನಿವಾಸಿ ಭಾರತೀಯರಾಗಿದ್ದು, ಬಹಳಷ್ಟು ಬಡವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದರು. ಇವರು ಇಬ್ಬರು ಪುತ್ರಿಯರು ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ.