ಹೇಮಾ

ಗುರುಪುರ: ಕುಪ್ಪೆಪದವು ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಬಿಸಿಯೂಟ ಅಡುಗೆ ಸಹಾಯಕಿಯಾಗಿದ್ದ ಹೇಮಾ(60) ಸೋಮವಾರ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಪತಿಯನ್ನು ಅಗಲಿರುವ ಇವರಿಗೆ ಮಕ್ಕಳಿಲ್ಲ. ಶಾಲಾ ಮಕ್ಕಳಲ್ಲಿ ಅಪಾರ ಪ್ರೀತಿ ತೋರಿಸುತ್ತಿದ್ದ ಇವರ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ಕಾರ್ಯದರ್ಶಿ ಶೇಖ್ ಅಬ್ದುಲ್ಲ, ಉದ್ಯಮಿ ಜಗದೀಶ್ ಕುಲಾಲ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story




