ಯು.ದಾಮೋದರ

ಉಡುಪಿ, ನ.5: ಉಡುಪಿಯ ಸಾಂಸ್ಕೃತಿಕ, ಕಲಾ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದ, ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಯು.ದಾಮೋದರ (94) ಅವರು ಇಂದು ನಿಧನರಾದರು. ಅವರು ಪತ್ನಿ ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಬ್ಯಾಂಕ್ ಸೇವೆಯಿಂದ ನಿವೃತ್ತರಾದ ಮೇಲೆ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನಲ್ಲೂ ಸಾರ್ವಜ ನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಯು.ದಾಮೋದರ್, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ವಿವಿಧ ಪರ್ಯಾಯ ಸಮಿತಿಗಳಲ್ಲಿ ಪದಾಧಿಕಾರಿಯಾಗಿ ಹಲವು ಸಂಘ-ಸಂಸ್ಥೆಗಳ ಸದಸ್ಯರಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಯಕ್ಷಗಾನ ಕಲಾರಂಗದ ಸ್ಥಾಪಕ ಸದಸ್ಯರಾಗಿ ದೀರ್ಘಕಾಲ ಸಂಸ್ಥೆಯೊಂದಿಗೆ ಸಕ್ರಿಯರಾಗಿದ್ದರು. ಸಂಸ್ಥೆ ಅವರಿಗೆ ಯಕ್ಷಗಾನ ಕಾರ್ಯಕರ್ತರಿಗೆ ನೀಡುವ ‘ಯಕ್ಷಚೇತನ’ ಪ್ರಶಸ್ತಿ ನೀಡಿ ಗೌರಸಿತ್ತು. ಯು.ದಾಮೋದರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.




