ರಮ್ಲಾನ್ ನೆಡ್ಯಾಲ್

ರಮ್ಲಾನ್ ನೆಡ್ಯಾಲ್
ಬಂಟ್ವಾಳ : ನೇರಳಕಟ್ಟೆ ರೈಲ್ವೆ ನಿಲ್ದಾಣದ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರ, ಯುವ ಉದ್ಯಮಿ ರಮ್ಲಾನ್ ನೆಡ್ಯಾಲ್ (48) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಯುವ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಅವರು ಸ್ಥಳೀಯ ಕ್ರೀಡಾ ಸಂಸ್ಥೆಯ ಪೋಷಕರಾಗಿ ಹಾಗೂ ಸಮಾಜ ಸೇವಕರಾಗಿ ಸೇವೆ ಸಲ್ಲಿಸಿದ್ದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಕೊನೆಯುಸಿರೆಳೆದರು.
ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.
Next Story




