ಮಂಗಳೂರು: ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಝಮೀರ್ ಅಂಬರ್ ನಿಧನ

ಝಮೀರ್ ಅಂಬರ್
ಮಂಗಳೂರು : ನಗರದ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಝಮೀರ್ ಅಂಬರ್ (80)ಬುಧವಾರ ತಡ ರಾತ್ರಿ ತಮ್ಮ ಮನೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಅವರು ಪ್ರವೃತ್ತಿಯಲ್ಲಿ ಸಮಾಜಮುಖಿ ಕೆಲಸಗಳ ಮೂಲಕ ಗುರುತಿಸಲ್ಪಟ್ಟಿದ್ದರು. ಜಮೀಯತುಲ್ ಫಲಾಹ್ ಸಂಘಟನೆಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಬೋಳಾರ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರಾಗಿ, ಮಂಗಳೂರು ವೆಲ್ಫೇರ್ ಅಸೋಸಿಯೇಶನ್ನ ಅಧ್ಯಕ್ಷರಾಗಿ ಕಾರ್ಯನಿರ್ಹಿಸಿದ್ದರು. ಅದಲ್ಲದೆ ಇನ್ನೂ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಅವರು ಅವಿಭಜಿತ ದ.ಕ.ಜಿಲ್ಲೆಯ ಸಂಘ ಸಂಸ್ಥೆಗಳು ಮತ್ತು ವ್ಯಾಪಾರ ಕೇಂದ್ರಗಳಿಗೆ ಸಂಬಂಧಿಸಿ ತೆರಿಗೆ ಮತ್ತು ಹಣಕಾಸು ಸಲಹೆ ನೀಡುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒರ್ವ ಪುತ್ರ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಇಂದು (ಗುರುವಾರ) ಮಧ್ಯಾಹ್ನ ಉಪ್ಪಳದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.




