ಟಿ.ಹನೀಫ್ ಕಾಂಜಿಲಕೊಡಿ ಅಡ್ಡೂರು

ಬಜ್ಪೆ: ಅಡ್ಡೂರು ಕಾಂಜಿಲಕೋಡಿಯ ನಿವಾಸಿ, ಮಾಜಿ ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಟಿ. ಹನೀಫ್ (60) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಸಮಾಜಸೇವೆಯ ಮೂಲಕ ಗುರುತಿಸಿಕೊಂಡಿದ್ದ ಹನೀಫ್ ಅವರು ಗುರುಪುರ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.
Next Story




