Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಉಡುಪಿ : ಯಕ್ಷ ಕಲಾವಿದ ಥಂಡಿಮನೆ ಶ್ರೀಪಾದ...

ಉಡುಪಿ : ಯಕ್ಷ ಕಲಾವಿದ ಥಂಡಿಮನೆ ಶ್ರೀಪಾದ ಭಟ್ ನಿಧನ

ವಾರ್ತಾಭಾರತಿವಾರ್ತಾಭಾರತಿ15 Oct 2026 3:46 PM IST
share
ಉಡುಪಿ : ಯಕ್ಷ ಕಲಾವಿದ ಥಂಡಿಮನೆ ಶ್ರೀಪಾದ ಭಟ್ ನಿಧನ

ಉಡುಪಿ, ಅ.15: ಮೂಲತ: ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸಾಲ್ಕಣಿ ಸಮೀಪದ ಥಂಡಿಮನೆಯವರಾದ ಬಡಾಬಡಗುತಿಟ್ಟು ಯಕ್ಷಗಾನದ ಮೇರು ಕಲಾವಿದ ಥಂಡಿಮನೆ ಶ್ರೀಪಾದ ತಿಮ್ಮಣ್ಣ ಭಟ್ (63) ಇಂದು ಬೆಳಗಿನ ಜಾವ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅನಾರೋಗ್ಯ ನಿಮಿತ್ತ ಚಿಕಿತ್ಸೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳದಿದ್ದಾರೆ ಎಂದು ತಿಳಿದುಬಂದಿದೆ.

ಯಕ್ಷಗಾನ ವಲಯದಲ್ಲಿ ಥಂಡಿಮನೆ ಎಂದೇ ಪ್ರಸಿದ್ಧರಾಗಿದ್ದ ಇವರು ಹೊಸ್ತೋಟ ಮಂಜುನಾಥ ಭಾಗವತರಲ್ಲಿ ಯಕ್ಷಗಾನ ಅಭ್ಯಾಸ ಮಾಡಿ 20ರ ಹರೆಯದಲ್ಲೇ ಯಕ್ಷರಂಗ ಪ್ರವೇಶಿಸಿದ್ದರು. ಸ್ವತಹ ಕಲಾವಿದರಾಗಿದ್ದ ತಂದೆ ತಿಮ್ಮಣ್ಣಭಟರ ಪ್ರೋತ್ಸಾಹ ದೊಂದಿಗೆ ಇವರು ಯಕ್ಷಗಾನ ರಂಗದಲ್ಲಿ ಖ್ಯಾತ ಕಲಾವಿದರಾಗಿ ರೂಪು ಗೊಂಡಿದ್ದರು.

ಬಡಗುತಿಟ್ಟು ಯಕ್ಷಗಾನದಲ್ಲಿ ಎರಡನೆಯ ವೇಷಕ್ಕೆ ಬೇಕಾದ ಸ್ವರಭಾರ, ಆಳಂಗ, ರಂಗ ನಿರ್ವಹಣಾ ಕ್ರಮದಿಂದ ಸಮರ್ಥ ಕಲಾವಿದರೆಂದು ಯಕ್ಷಗಾನ ಪ್ರೇಮಿಗಳಿಂದ ಗುರುತಿಸಿಕೊಂಡಿದ್ದ ಶ್ರೀಪಾದ ಭಟ್ಟರು, ಶಿರಸಿ ಪಂಚಲಿಂಗ, ಶಿರಸಿ ಮಾರಿಕಾಂಬ, ಸಾಲಿಗ್ರಾಮ, ಮಂದಾರ್ತಿ ಕೊನೆಯ ಕೆಲವು ವರ್ಷ ಪೆರ್ಡೂರು ಮೇಳದಲ್ಲಿ ಎರಡನೆಯ ವೇಷಧಾರಿಯಗಿ ಒಟ್ಟು ನಾಲ್ಕು ದಶಕಗಳ ಕಾಲ ಕಲಾಸೇವೆ ಗೈದಿದ್ದರು.

ಇವರ ಈಶ್ವರ, ದಶರಥ, ಸಾಲ್ವ, ಭೀಷ್ಮ, ಕಾರ್ತವೀರ್ಯ, ಯಮ, ಶುಕ್ರಾಚಾರ್ಯ, ಯಯಾತಿ, ದುಷ್ಟಬುದ್ಧಿ, ರಕ್ತಜಂಘ, ವಲಲ, ಕಂಸ ಹೀಗೆ ಹಲವು ಪೌರಾಣಿಕ ಪಾತ್ರಗಳು ಕಲಾರಸಿಕರ ಮೆಚ್ಚುಗೆ ಗಳಿಸಿದ್ದವು. ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆ ಎರಡು ವಷರ್ಗಳ ಹಿಂದೆ ಇವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಟ್ಟರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಪಾದ ಭಟ್ಟರು ತಂದೆ, ತಾಯಿ, ಪತ್ನಿ, ದತ್ತುಪುತ್ರ ಹಾಗು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X