Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಹಿರಿಯ ಲೇಖಕಿ ಲಲಿತಾ ರೈ ನಿಧನ

ಹಿರಿಯ ಲೇಖಕಿ ಲಲಿತಾ ರೈ ನಿಧನ

ವಾರ್ತಾಭಾರತಿವಾರ್ತಾಭಾರತಿ13 Oct 2025 7:34 PM IST
share
ಹಿರಿಯ ಲೇಖಕಿ ಲಲಿತಾ ರೈ ನಿಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯಪೂರ್ವದ ಮೊದಲ ಸಾಲಿನ ಲೇಖಕಿಯರಲ್ಲಿ ಒಬ್ಬರೆಂದು ಗುರುತಿಸಲ್ಪಡುವ ಹಾಗೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದ ಹಿರಿಯ ಲೇಖಕಿ ಲಲಿತಾ ರೈ ಅವರು (98) ಅ.11 ರಂದು ಮಂಗಳೂರಿನ ತನ್ನ ಸ್ವಗೃಹದಲ್ಲಿ ನಿಧನರಾದರು.

ಮಂಗಳೂರಿನ ಬೆಸೆಂಟ್ ಪ್ರೌಢಶಾಲೆಯ ಮೆಟ್ರಿಕ್ ತರಗತಿಯ ಮೊದಲ ತಂಡದ ವಿದ್ಯಾರ್ಥಿನಿಯಾಗಿದ್ದ ಲಲಿತಾ ರೈ ಅವರು ಸೈಂಟ್ ಆಗ್ನೇಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ಸೈಂಟ್ ಆನ್ಸ್ ಬಿ. ಎಡ್ ಕಾಲೇಜಿನಲ್ಲಿ ಶಿಕ್ಷಕ ತರಬೇತಿ ಅಧ್ಯಯನ ಮಾಡಿ ಕೆನರಾ ಪ್ರೌಢಶಾಲೆಯಲ್ಲಿ ಅಧ್ಯಾಪಕಿ ವೃತ್ತಿಯನ್ನು ಆರಂಭಿಸಿದ್ದರು. ಮಂಗಳೂರಿನ ಮಹಿಳಾ ಸಭಾ, ಭಗಿನಿ ಸಮಾಜ ಥಿಯೋಪಿಕಲ್ ಸೊಸೈಟಿಯ ಸ್ಥಾಪಕ ಸಂಸ್ಥೆಯಾಗಿದ್ದ ಲಲಿತಾ ರೈ ಅವರು ಮಹಿಳಾ ಸಬಲೀಕರಣದ ಅನೇಕ ಸೇವಾ ಕಾರ್ಯಗಳಲ್ಲಿ ಮಂಚೂಣಿಯಲ್ಲಿದ್ದರು. ವಿವಿಧ ಸಂದರ್ಭದಲ್ಲಿ ಮಹಿಳಾಪರ ಚಳವಳಿಯಲ್ಲಿಯೂ ಅವರು ಭಾಗಿಯಾಗಿದ್ದರು. ಕರಾವಳಿ ಲೇಖಕಿಯರ ಹಾಗೂ ವಾಚಕೀಯರ ಸಂಘದ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಲಲಿತಾ ರೈ ಅವರು ಸ್ವಾತಂತ್ರ್ಯ ಪೂರ್ವದಲ್ಲೇ ಪತ್ರಿಕೆಗಳಲ್ಲಿ ಕತೆ, ಲೇಖನಗಳನ್ನು ಬರೆದಿದ್ದರು. ‘ಚಿತ್ತಗಾಂಗ್ನ ಕ್ರಾಂತಿವೀರರರು’, ಲಲಿತಾ ರೈ ಅವರ ಅನುವಾದಿತ ಕೃತಿ. ‘ಮತ್ತೆ ಬೆಳಗಿತು ಸೊಡರು’, (ಕಥಾ ಸಂಕಲನ), ‘ಇಂಟರ್ನೆಟ್ನೊಳಗೆ ಮತ್ತು ಇತರ ಕತೆಗಳು (ಕಥಾ ಸಂಕಲನ) ಗೃಹಣ ಕಳೆಯಿತು (ಕನ್ನಡ ಕಾದಂಬರಿ), ‘ದೇಸಾಂತರ’, ‘ಬೊಂಟೆ ದೇರ್ಂಡ್’, (ತುಳುಕಾದಂಬರಿ) ಲಲಿತಾ ರೈ ಅವರ ಪ್ರಮುಖ ಕೃತಿಗಳು.

ಎಸ್.ಯು ಪಣಿಯಾಡಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘ ಪ್ರಶಸ್ತಿ, ರಾಣಿ ಅಬ್ಬಕ್ಕ ಪ್ರಶಸ್ತಿ, ಸಂದೇಶ ಪ್ರತಿಷ್ಠಾನ ಪ್ರಶಸ್ತಿ, ತುಳು ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ, ಕರ್ನಾಟಕ ಸರಕಾರದ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಮತ್ತು ಅನೇಕ ಸ್ಥಳೀಯ ಸಂಘ ಸಂಸ್ಥೆಗಳ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಅವರ ಅಂತಿಮ ಯಾತ್ರೆಯ ವಿಧಿವಿಧಾನಗಳು ಕೊಡಿಯಲ್ ಬೈಲು ಗುತ್ತು ಪಶ್ಚಿಮ ರಸ್ತೆಯಲ್ಲಿರುವ ಅವರ ಸ್ವಗೃಹದ ‘ಲಲಿತಾ ರೆಸಿಡೆನ್ಸಿ ವಿಶ್ವಾಸ’ ಇಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

ಸಂತಾಪ :

ಲಲಿತಾ ರೈ ಅವರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X